
ವಿಜಯಪುರ, 02 ಮೇ (ಹಿ.ಸ.) :
ಆಂಕರ್ : ವಿಶ್ವ ಕಾರ್ಮಿಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹೇಶ ದೊಡಮನಿ, ಸಮಿಯುಲ್ಲಾ ಕಾಖಂಡಕಿ, ಮಹಾಂತೇಶ ಗಚ್ಚಿನಮನಿ, ಮಹೇಂದ್ರ ಸರಸಂಗಿ, ಸಲೀಂ ಸೌದಾಗರ ಸೇರಿದಂತೆ ಹಲವಾರು ಕಾರ್ಮಿಕರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಮಾತನಾಡಿ, ಜಗತ್ತಿನ ಎಲ್ಲಾ ಜೀವಿಗಳು ಒಂದಲ್ಲೊಂದು ರೀತಿಯಲ್ಲಿ ಕಾರ್ಮಿಕರೇ ಎಂಬ ಭಾವನೆಯೊಂದಿಗೆ ವಿಶ್ವ ಕಾರ್ಮಿಕ ದಿನವನ್ನು ಆಚರಿಸಲಾಗುತ್ತಿದೆ ಎಂದು ಹೇಳಿದರು.
ಮನೆ ನಿರ್ಮಾಣದಿಂದ ಹಿಡಿದು ಆಹಾರ ತಯಾರಿ, ವಾಹನ ಚಾಲನೆ, ಆಸ್ಪತ್ರೆ ಸೇವೆ, ರೈಲ್ವೆ, ಬೀಡಿ ಕಟ್ಟುವುದು, ಸೀರೆ ನೇಯುವುದು, ಇಟ್ಟಿಗೆ ತಯಾರಿಕೆ, ಪತ್ರಿಕಾ ಮಾಧ್ಯಮ ಹಾಗೂ ಪೌರ ಸೇವೆಗಳವರೆಗೆ ಅನೇಕ ಕ್ಷೇತ್ರಗಳಲ್ಲಿ ಕಾರ್ಮಿಕರು ಸಲ್ಲಿಸುತ್ತಿರುವ ಸೇವೆ ಅಮೂಲ್ಯವಾಗಿದೆ ಎಂದು ಹೇಳಿದರು. ಅವರ ಸುಖ-ಸಂತೋಷಕ್ಕಾಗಿ ಎಲ್ಲರೂ ಪ್ರಾರ್ಥಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಕಾಂಗ್ರೆಸ್ ಮುಖಂಡ ಎಫ್.ಎಚ್. ಅಂಕಲಗಿ (ವಕೀಲರು), ವಿದ್ಯಾವತಿ ಅಂಕಲಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಂ. ಮುಲ್ಲಾ, ವಸಂತ ಹೊನಮೋಡೆ, ದೇಸು ಚವ್ಹಾಣ, ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ ಬಕ್ಷಿ ಸೇರಿದಂತೆ ಹಲವು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು
ಹಿಂದೂಸ್ತಾನ್ ಸಮಾಚಾರ್ / jyothi deshpande