
ಚಿಕ್ಕಮಗಳೂರು, 02 ಮೇ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನ ಸಭಾ ಕ್ಷೇತ್ರದಲ್ಲಿ ಚಲಾವಣೆಯಾಗಿದ್ದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಇಂದು ಚಿಕ್ಕಮಗಳೂರಿನ ಐಡಿಎಸ್ಜಿ ಕಾಲೇಜಿನಲ್ಲಿ ಆರಂಭವಾಗಿದೆ.
ಕ್ಷೇತ್ರದಲ್ಲಿ ಒಟ್ಟು 1,822 ಅಂಚೆ ಮತಗಳನ್ನು ಮರು ಎಣಿಕೆಗೆ ಒಳಪಡಿಸಲಾಗುತ್ತಿದೆ. ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಬಿಜೆಪಿಯ ಅಭ್ಯರ್ಥಿ ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಂತರದಿಂದ ಜಯಗಳಿಸಿದ್ದರು.
ಅತಿ ಕಡಿಮೆ ಮತಗಳ ಅಂತರದಿಂದ ಫಲಿತಾಂಶ ಬಂದ ಹಿನ್ನೆಲೆಯಲ್ಲಿ, ಬಿಜೆಪಿಯ ಜೀವರಾಜ್ ಅವರು ನ್ಯಾಯಾಲಯದ ಮೊರೆ ಹೋಗಿ ಅಂಚೆ ಮತಗಳ ಮರು ಎಣಿಕೆಗೆ ಮನವಿ ಸಲ್ಲಿಸಿದ್ದರು. ನ್ಯಾಯಾಲಯದ ಆದೇಶದ ಮೇರೆಗೆ ಮರು ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa