
ಬಾಗಲಕೋಟೆ, 02 ಮೇ (ಹಿ.ಸ.) :
ಆಂಕರ್ : ವಿಧಾನ ಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ–2023ರ ಕಲಂ 163ರ ಅನ್ವಯ ಮೇ 4ರ ಬೆಳಿಗ್ಗೆ 6 ಗಂಟೆಯಿಂದ ಮೇ 5ರ ಬೆಳಿಗ್ಗೆ 6 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ 10 ಕಿ.ಮೀ ವ್ಯಾಪ್ತಿಯಲ್ಲಿ ಮೇ 4ರ ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸರಬರಾಜು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮದ್ಯ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್ಗಳು, ಹೋಟೆಲ್ಗಳು, ಕ್ಲಬ್ಗಳು, ಡಾಬಾಗಳು ಸೇರಿದಂತೆ ಎಲ್ಲಾ ಸ್ಥಳಗಳಲ್ಲಿ ಮದ್ಯ ವಿತರಣೆ ಹಾಗೂ ಸೇವನೆಗೆ ನಿರ್ಬಂಧ ಹೇರಲಾಗಿದೆ.
ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಯುವಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ಯಾವುದೇ ಅಹಿತಕರ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದ್ದು, ಸಾರ್ವಜನಿಕರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ
ಹಿಂದೂಸ್ತಾನ್ ಸಮಾಚಾರ್ / jyothi deshpande