
ಬಾಗಲಕೋಟೆ, 02 ಮೇ (ಹಿ.ಸ.) :
ಆಂಕರ್ : ಮೇ 3, 2026 ರಂದು ಬಾಗಲಕೋಟೆ ನಗರದಲ್ಲಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಭದ್ರತಾ ಸಜ್ಜಾಗಿದ್ದು, ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ಮಾರ್ಗಸೂಚಿಗಳನ್ನು ನೀಡಲಾಗಿದೆ.
ಪರೀಕ್ಷೆ ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಭದ್ರತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲಾಗಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸೂಚಿಸಲಾಗಿದೆ. ಪರೀಕ್ಷಾರ್ಥಿಗಳು ಸಮಯಕ್ಕೆ ಸರಿಯಾಗಿ ಕೇಂದ್ರಗಳಿಗೆ ಆಗಮಿಸಲು ಹಾಗೂ ನಿಯಮಗಳನ್ನು ಪಾಲಿಸಲು ಮನವಿ ಮಾಡಲಾಗಿದೆ.
ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು, ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತಿನ ವಾತಾವರಣ ಕಾಪಾಡಬೇಕು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ತಿಳಿಸಿದರು.
ಇದೇ ವೇಳೆ ಟ್ರಾಫಿಕ್ ವ್ಯವಸ್ಥೆಯನ್ನು ಸುಗಮಗೊಳಿಸಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ವಾಹನ ಸಂಚಾರವನ್ನು ನಿಯಂತ್ರಿಸಲಾಗುತ್ತದೆ. ಪೋಷಕರು ಹಾಗೂ ಸಾರ್ವಜನಿಕರು ಅನಾವಶ್ಯಕವಾಗಿ ಕೇಂದ್ರಗಳ ಬಳಿ ಗುಂಪುಗೂಡದಂತೆ ಮನವಿ ಮಾಡಲಾಗಿದೆ.
ಪರೀಕ್ಷೆಯು ಯಾವುದೇ ಅಡಚಣೆಗಳಿಲ್ಲದೆ ಯಶಸ್ವಿಯಾಗಿ ನಡೆಯುವಂತೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುತ್ತಿವೆ
ಹಿಂದೂಸ್ತಾನ್ ಸಮಾಚಾರ್ / jyothi deshpande