
ಕೋಲಾರ, ೨೧ ಮೇ (ಹಿ.ಸ) :
ಆ್ಯಂಕರ್ : ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಬುಧವಾರದಂದು ಆಚರಿಸಿ, ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.
ಪ್ರತಿಜ್ಞಾ ವಿಧಿಯನ್ನು ಡಿವೈಎಸ್ಪಿ ಲಕ್ಷ್ಮಯ್ಯನವರು ಬೋಧಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟçದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತಾ, ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರು ಶಿವಾಂಶು ರಜಪೂತ, ಸಹಾಯಕ ಆಡಳಿತಾಧಿಕಾರಿ ಜಿ.ವಿಶ್ವನಾಥ ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಹಾಗೂ ಲಿಪಿಕ ನೌಕರರು ಹಾಜರಿದ್ದರು.
ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆ ಹಾಗೂ ಇಲಾಖೆಯ ಎಲ್ಲಾ ಕಛೇರಿಗಳಲ್ಲಿ ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸಿ, ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಲಾಯಿತು.
ಕೆಜಿಎಫ್ ಎಸ್.ಪಿ. ಕಛೇರಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್