
ಧಾರವಾಡ, 21 ಮೇ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದ ನಿರ್ದೇಶನದಂತೆ ಧಾರವಾಡ ನಗರದಲ್ಲಿರುವ ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ಆಸ್ಪತ್ರೆಯನ್ನು ಜೂನ್ 1, 2026ರಿಂದ ಶಾಶ್ವತವಾಗಿ ಮುಚ್ಚಲಾಗುತ್ತಿದೆ.
ಆಸ್ಪತ್ರೆ ಬಂದ್ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫಲಾನುಭವಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ಹುಬ್ಬಳ್ಳಿಯ ಪಿ.ಬಿ.ರಸ್ತೆ ಸಮೀಪದ ಆರ್.ಎಂ. ಚಾಟನಿಸ್ ಬಿಲ್ಡಿಂಗ್ನಲ್ಲಿರುವ ಬೀಡಿ ಕಾರ್ಮಿಕರ ಕಲ್ಯಾಣ ನಿಧಿ ಸ್ಥಿರ ಉಪಚಿಕಿತ್ಸಾಲಯದಲ್ಲಿ ಆರೋಗ್ಯ ಸೇವೆಗಳು ಮುಂದುವರಿಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸ್ಪತ್ರೆಯ ವೈದ್ಯಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದು, ಫಲಾನುಭವಿಗಳು ಹುಬ್ಬಳ್ಳಿಯ ಉಪಚಿಕಿತ್ಸಾಲಯದಲ್ಲಿ ಲಭ್ಯವಿರುವ ಆರೋಗ್ಯ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.