ಕೋಲಾರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗುದ್ದಲಿ ಪೂಜೆ
ಕೋಲಾರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಗುದ್ದಲಿ ಪೂಜೆ
ಕೋಲಾರ ನಗರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.


ಕೋಲಾರ, ಮೇ ೨೧ (ಹಿ.ಸ) :

ಆ್ಯಂಕರ್ : ನಗರದ ವಿವಿಧೆಡೆ ಬೀದಿ ವ್ಯಾಪಾರಿಗಳು ಮತ್ತು ಸಂಚಾರಿ ವ್ಯಾಪಾರಿಗಳನ್ನು ಒಂದೇ ಸೂರಿನಡಿ ತರಲು ಪ್ರಯತ್ನವಾಗಿ ಟಿ.ಚೆನ್ನಯ್ಯ ಸಂತೆ ಮೈದಾನ ಹಾಗೂ ಪ್ರಭಾತ್ ಟಾಕೀಸ್ ರಸ್ತೆ ಪಕ್ಕದಲ್ಲಿ ಸ್ಟ್ರೀಟ್ ವೆಂಡರ್ಸ್ ಜೋನ್ ಅಭಿವೃದ್ಧಿ ನಡೆಸಲಾಗುತ್ತಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ಕೋಲಾರ ನಗರಸಭೆ ವತಿಯಿಂದ ನಗರದ ವಿವಿಧೆಡೆ ಅಂದಾಜು ೨.೫೩ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದ ಅವರು ಸತ್ಯನಾರಾಯಣ ಜ್ಯುವೆಲ್ಲರ್ಸ್ ಸಹಯೋಗದಲ್ಲಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪದ ಅಂತರಗAಗೆ ರಸ್ತೆಗೆ ಕಮಾನು (ಎ.ಆರ್.ಸಿ. ಹೆಚ್) ನಿರ್ಮಾಣಕ್ಕೆ ೧.೫೦ ಕೋಟಿ ಮತ್ತು ಬಸ್ ನಿಲ್ದಾಣದ ಕಡೆಯಿಂದ ಕಾಳಮ್ಮ ಗುಡಿ ರಸ್ತೆ ಸಂಪರ್ಕಿಸುವ ರಾಣಿ ಚೆನ್ನಮ್ಮ ವೃತ್ತದ ೫೨ ಲಕ್ಷ ರೂಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಇದೇ ವೇಳೆ ನಗರಸಭೆಯ ಐ.ಡಿ.ಎಸ್.ಎಂ.ಟಿ ಯೋಜನೆಯ ಲೆಕ್ಕ ಶೀರ್ಷಿಕೆಯಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಸಮೀಪ ಟಿ.ಚನ್ನಯ್ಯ ಸಂತೆ ಮೈದಾನದಲ್ಲಿ ೧೮೦ ಲಕ್ಷ ವೆಚ್ಚದಲ್ಲಿ ಹೂವು, ಹಣ್ಣು,ತರಕಾರಿ ಮಾರುಕಟ್ಟೆ ನಿರ್ಮಾಣ, ಹಾಗೂ ನಗರಸಭೆ ನಿಧಿಯಲ್ಲಿ ವಾರ್ಡ್ ನಂಬರ್ ೯ರ ಸರ್ವಜ್ಞ ಪಾರ್ಕ್ ಹಿಂಭಾಗ ಪ್ರಭಾತ ಟ್ಯಾಕೀಸ್ ರಸ್ತೆಯಲ್ಲಿ ಸ್ಟ್ರೀಟ್ ವೆಂಡರ್ಸ್ ಕಾಮಗಾರಿಗೆ, ಗುದ್ದಲಿ ಪೂಜೆ ನೆರವೇರಿಸಿದರು.

ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂಬರುವ ಸಚಿವ ಸಂಪುಟ ವಿಸ್ತರಣೆ ವೇಳೆ ಕೋಲಾರ ಜಿಲ್ಲೆಯ ಯಾರಿಗಾದರೂ ಒಬ್ಬರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಬಗ್ಗೆ ಶೀಘ್ರದಲ್ಲೇ ದಾಖಲೆ ಸಮೇತ ಮಾಧ್ಯಮಗಳಿಗೆ ಹಾಗೂ ವಿಪಕ್ಷಗಳಿಗೆ ತಿಳಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀ ದೇವಮ್ಮ ರಮೇಶ್, ಕಾಂಗ್ರೆಸ್ ಪರಿಶಿಷ್ಟ ಪಂಗಡಗಳ ವಿಭಾಗದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್ ಸತ್ಯನಾರಾಯಣ ಜ್ಯುವೆಲ್ಲರ್ಸ್ ಮಾಲೀಕ ಕಾಂಗ್ರೆಸ್ ಮುಖಂಡರಾದ ಕಠಾರಿಪಾಳ್ಯ ಗಂಗಣ್ಣ ಅಮರನಾಥ್, ಸೇರಿದಂತೆ ನಗರಸಭೆ ಅಧಿಕಾರಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande