ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತ ಇಲ್ಲ : ಸಿದ್ದರಾಮಯ್ಯ
ಬೆಂಗಳೂರು, 21 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂಧನ ಬೆಲೆ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ತೆರಿಗೆ ಇಳಿಕೆ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಅವರು ತೀವ್
ಸಿದ್ದರಾಮಯ್ಯ


ಬೆಂಗಳೂರು, 21 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇಂಧನ ಬೆಲೆ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರ ತೆರಿಗೆ ಇಳಿಕೆ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಅವರು ತೀವ್ರ ಪ್ರತಿಕ್ರಿಯೆ ನೀಡಿದರು.

ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ಕೇಂದ್ರ ಸರ್ಕಾರವೇ ಬೆಲೆ ಹೆಚ್ಚಿಸುತ್ತದೆ, ಆದರೆ ಅದನ್ನು ಪ್ರಶ್ನಿಸುವುದಿಲ್ಲ. ನಾವು ತೆರಿಗೆ ಕಡಿಮೆ ಮಾಡುತ್ತೀರಾ ಎಂದು ಮಾತ್ರ ಕೇಳುತ್ತೀರಿ. ಅವರು ಯಾಕೆ ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಯಾರೂ ಪ್ರಶ್ನಿಸುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹಳೆಯ ಹಾಗೂ ಇಂದಿನ ಇಂಧನ ದರಗಳನ್ನು ಹೋಲಿಕೆ ಮಾಡಿದ ಅವರು, ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮತ್ತು ಡೀಸೆಲ್ ದರ ಎಷ್ಟು ಇತ್ತು? ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಪೆಟ್ರೋಲ್ 70 ರೂ., ಡೀಸೆಲ್ 48 ರೂ. ಇತ್ತು. ಗ್ಯಾಸ್ ಸಿಲಿಂಡರ್ ಬೆಲೆ 414 ರೂ. ಇತ್ತು. ಈಗ ದರಗಳು ಎಷ್ಟು ಏರಿಕೆಯಾಗಿದೆ? ಜನರಿಗೆ ಗೊತ್ತಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಜನರಿಗೆ ಏನಾದರೂ ಪರಿಹಾರ ನೀಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಬೆಲೆ ಹೆಚ್ಚಿಸಿದರೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡಲಿ ಎಂದು ಕೇಳುತ್ತೀರಿ. ಆದರೆ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸುವುದಿಲ್ಲ. ನಿಮ್ಮ ಪ್ರಶ್ನೆಗಳಲ್ಲೇ ಕೇಂದ್ರ ಸರ್ಕಾರದ ಪರವಾದ ನಿಲುವು ಕಾಣುತ್ತಿದೆ” ಎಂದು ಮಾಧ್ಯಮಗಳ ಮೇಲೆಯೂ ಅಸಮಾಧಾನ ಹೊರಹಾಕಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande