ಪ್ರಧಾನಿ ಮತ್ತು ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ದೂರು
ನವದೆಹಲಿ, 21 ಮೇ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ವಿವಾದ ಉದ್ಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಮತ್ತು ಅಸಭ್ಯ ಪದಗಳನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪೊಲೀಸ್ ದೂರು
ಪ್ರಧಾನಿ ಮತ್ತು ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ; ರಾಹುಲ್ ಗಾಂಧಿ ವಿರುದ್ಧ ದೂರು


ನವದೆಹಲಿ, 21 ಮೇ (ಹಿ.ಸ.) :

ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ವಿವಾದ ಉದ್ಭವಿಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಮತ್ತು ಅಸಭ್ಯ ಪದಗಳನ್ನು ಬಳಸಿದ ಆರೋಪದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪೊಲೀಸ್ ದೂರು ದಾಖಲಿಸಲಾಗಿದೆ.

ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ದೆಹಲಿ ಘಟಕದ ವಕ್ತಾರ ಅಭಿಷೇಕ್ ದುಬೆ ಅವರು ದಕ್ಷಿಣ ದೆಹಲಿಯ ತಿಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ಸಲ್ಲಿಸಿದ್ದು, ರಾಹುಲ್ ಗಾಂಧಿ ವಿರುದ್ಧ ಪ್ರಾಥಮಿಕ ಮಾಹಿತಿ ವರದಿ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

ದೂರುದಾರ ಅಭಿಷೇಕ್ ದುಬೆ ಅವರ ಪ್ರಕಾರ, ಮೇ 20ರಂದು ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ “ದೇಶದ್ರೋಹಿ” ಎಂಬ ರೀತಿಯ ಪ್ರಚೋದನಕಾರಿ ಮತ್ತು ಅಸಭ್ಯ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ.

ಇಂತಹ ಹೇಳಿಕೆಗಳು ದೇಶದ ಉನ್ನತ ಸಂವಿಧಾನಾತ್ಮಕ ಹುದ್ದೆಗಳ ಗೌರವಕ್ಕೆ ಧಕ್ಕೆ ತರುವುದರ ಜೊತೆಗೆ ಸಮಾಜದಲ್ಲಿ ವೈಮನಸ್ಯ, ಆಕ್ರೋಶ ಮತ್ತು ಅಸಮಾಧಾನವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಾರ್ವಜನಿಕ ವೇದಿಕೆಯಲ್ಲಿ ಈ ರೀತಿಯ ಭಾಷೆ ಬಳಕೆ ಮಾಡುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಭಾರತೀಯ ನ್ಯಾಯ ಸಂಹಿತೆ ಸೇರಿದಂತೆ ಸಂಬಂಧಿತ ಕಾನೂನು ವಿಧಿಗಳ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧ ತಕ್ಷಣವೇ ಎಫ್ಐಆರ್ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೆಹಲಿ ಪೊಲೀಸರಿಗೆ ಮನವಿ ಮಾಡಲಾಗಿದೆ.

ರಾಜಕೀಯ ಕ್ಷೇತ್ರದಲ್ಲಿ ಇಂತಹ ಅಸಭ್ಯ ವರ್ತನೆಗೆ ಕಡಿವಾಣ ಹಾಕುವುದು ಅಗತ್ಯವಾಗಿದ್ದು, ಭವಿಷ್ಯದಲ್ಲಿ ಸಾರ್ವಜನಿಕ ಜೀವನದಲ್ಲಿರುವ ಯಾರೂ ಇಂತಹ ಭಾಷೆ ಬಳಸಲು ಧೈರ್ಯಪಡಬಾರದು ಎಂಬ ಉದ್ದೇಶದಿಂದ ದೂರು ನೀಡಲಾಗಿದೆ ಎಂದು ಅಭಿಷೇಕ್ ದುಬೆ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande