ಭಯೋತ್ಪಾದನಾ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ, 21 ಮೇ (ಹಿ.ಸ.) : ಆ್ಯಂಕರ್ : ಭಯೋತ್ಪಾದನೆ ಹಾಗೂ ಹಿಂಸಾಚಾರದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸಿ, ಶಾಂತಿ, ಸಹಬಾಳ್ವೆ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಬಲಪಡಿಸುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ ಅಂಗವ
ಫೋಟೋ


ಗದಗ, 21 ಮೇ (ಹಿ.ಸ.) :

ಆ್ಯಂಕರ್ : ಭಯೋತ್ಪಾದನೆ ಹಾಗೂ ಹಿಂಸಾಚಾರದ ವಿರುದ್ಧ ಸಮಾಜದಲ್ಲಿ ಜಾಗೃತಿ ಮೂಡಿಸಿ, ಶಾಂತಿ, ಸಹಬಾಳ್ವೆ ಮತ್ತು ಸಾಮಾಜಿಕ ಸೌಹಾರ್ದತೆಯನ್ನು ಬಲಪಡಿಸುವ ಉದ್ದೇಶದಿಂದ ಜಿಲ್ಲಾಡಳಿತ ವತಿಯಿಂದ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಿಂಸೆ ಹಾಗೂ ಭಯೋತ್ಪಾದನೆ ವಿರುದ್ಧ ಹೋರಾಡುವ ಸಂಕಲ್ಪ ಕೈಗೊಂಡರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಪ್ರತಿಜ್ಞಾ ವಚನ ಬೋಧಿಸಿ, ಅಹಿಂಸೆ, ಸಹನೆ ಹಾಗೂ ಶಾಂತಿಗೆ ಹೆಸರಾದ ಭಾರತದ ಮಹಾನ್ ಪರಂಪರೆಯ ಮೇಲೆ ದೃಢ ವಿಶ್ವಾಸ ಹೊಂದಿರುವ ನಾವು, ಎಲ್ಲ ರೀತಿಯ ಭಯೋತ್ಪಾದನೆ ಮತ್ತು ಹಿಂಸಾಚಾರವನ್ನು ನಮ್ಮ ಶಕ್ತಿ ಹಾಗೂ ಸಾಮರ್ಥ್ಯದ ಮೂಲಕ ಎದುರಿಸಿ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧರಾಗಿರಬೇಕು ಎಂದು ತಿಳಿಸಿದರು.

ಅವರು ಮಾತನಾಡಿ, ದೇಶದ ಏಕತೆ, ಸಮಗ್ರತೆ ಮತ್ತು ಶಾಂತಿಪೂರ್ಣ ವಾತಾವರಣಕ್ಕೆ ಭಯೋತ್ಪಾದನೆ ದೊಡ್ಡ ಸವಾಲಾಗಿದ್ದು, ಅದನ್ನು ತಡೆಯಲು ಸಾರ್ವಜನಿಕರು, ಆಡಳಿತ ವ್ಯವಸ್ಥೆ ಹಾಗೂ ವಿವಿಧ ಇಲಾಖೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವುದು ಅತ್ಯಗತ್ಯವಾಗಿದೆ ಎಂದರು. ಸಮಾಜದಲ್ಲಿ ದ್ವೇಷ, ಅಸಹಿಷ್ಣುತೆ ಹಾಗೂ ವಿಭಜನೆ ಸೃಷ್ಟಿಸಲು ಯತ್ನಿಸುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಜಾಗೃತ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಿಂಸೆ ಮತ್ತು ಭಯೋತ್ಪಾದನೆಗೆ ಯಾವುದೇ ರೀತಿಯ ಬೆಂಬಲ ನೀಡದೆ, ಶಾಂತಿ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯ ಏಕತೆಯನ್ನು ಕಾಪಾಡಲು ಸದಾ ಶ್ರಮಿಸುವುದಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಮಹಾಂತೇಶ್ ಸಜ್ಜನರ, ವಿವಿಧ ಇಲಾಖೆಗಳ ಅಧಿಕಾರಿಗಳು, ಕಂದಾಯ ಇಲಾಖೆಯ ಶಿರಸ್ತೇದಾರರು, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಭಯೋತ್ಪಾದನಾ ವಿರೋಧಿ ದಿನಾಚರಣೆಯ ಮೂಲಕ ಸಮಾಜದಲ್ಲಿ ಶಾಂತಿ, ಮಾನವೀಯ ಮೌಲ್ಯಗಳು ಹಾಗೂ ರಾಷ್ಟ್ರೀಯ ಐಕ್ಯತೆಯ ಸಂದೇಶ ಸಾರುವ ಪ್ರಯತ್ನಕ್ಕೆ ಜಿಲ್ಲಾಡಳಿತ ಮುಂದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande