
ಕೋಲಾರ, ಮೇ ೨೦ (ಹಿ.ಸ) :
ಆ್ಯಂಕರ್ : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಆಧುನಿಕ ಭಾರತದ ರೂವಾರಿಯಾಗಿದ್ದರು ಅವರು ಭಾರತ ದೇಶವು ಇವತ್ತು ಏನಾದರೂ ವಿಶ್ವದ ಆಧುನಿಕ ತಂತ್ರಜ್ಞಾನವನ್ನು ಹೊಂದಿರುವ ಅಭಿವೃದ್ಧಿಶೀಲ ರಾಷ್ಟ್ರವಾಗುವಲ್ಲಿ ಅವರ ಆಡಳಿತಾತ್ಮಕ ದೂರದೃಷ್ಟಿತ್ವವೇ ಕಾರಣವಾಗಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಭಾರತ ರತ್ನ ದಿವಂಗತ ರಾಜೀವ್ ಗಾಂಧಿಯವರ ೩೫ನೇ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದ ಸರ್ವಾಂಗಿಣ ಅಭಿವೃದ್ಧಿಯು ಗ್ರಾಮೀಣ ಅಭಿವೃದ್ಧಿಯನ್ನು ಅವಲಂಬಿಸಿದೆ. ಈ ನಿಟ್ಟಿನಲ್ಲಿ ಒಬ್ಬ ಪ್ರಧಾನಿಯಾಗಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೆ ತಂದು ಗ್ರಾಮೀಣ ಮಟ್ಟದ ಬಡ ವರ್ಗದ ಜನರಿಗೆ ಆಡಳಿತ ನಡೆಸುವ ಅಧಿಕಾರವನ್ನು ಕೊಟ್ಟವರು ರಾಜೀವ್ ಗಾಂಧಿಯವರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಮಹಾಕ್ರಾಂತಿಗೆ ನಾಂದಿಯಾಗುವ0ತೆ ಮಾಡಿದ್ದಾರೆ ಎಂದರು
ಸ್ಥಳೀಯ ಮಟ್ಟದಲ್ಲಿ ಅಧಿಕಾರ ವಿಕೇಂದ್ರೀಕರಣಗೊಳಿಸಿ ರಾಷ್ಟ್ರದ ದಲಿತರು, ಹಿಂದುಳಿದವರು ಹಾಗೂ ಜನಸಾಮಾನ್ಯರಿಗೆ ಶಾಶ್ವತವಾಗಿ ಮೀಸಲಾತಿ ಕಲ್ಪಿಸಿದ ನಾಯಕ ರಾಜೀವ್ಗಾಂಧಿ ೧೮ ವರ್ಷದ ಯುವ ವರ್ಗಕ್ಕೆ ಮತದಾನದ ಅಧಿಕಾರವನ್ನು ನೀಡಿ ಅವರು ದೇಶದ ರಾಜಕೀಯ ವ್ಯವಸ್ಥೆಯ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿರುವುದು ಎಂದಿಗೂ ಮಾದರಿಯಾಗಿದ್ದಾರೆ ಎಂದರು
ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ದೇಶದ ಅಖಂಡತೆ ಮತ್ತು ಸೈದಾಂತಿಕ ಬದ್ದತೆಗಾಗಿ ತನ್ನ ಪ್ರಾಣವನ್ನೇ ಮುಡಿಪಾಗಿಟ್ಟು ರಾಜೀವ್ ಗಾಂಧಿಯವರು ಹುತಾತ್ಮರಾದರು. ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರ ಮನಸ್ಸಿನಲ್ಲಿಯೂ ಅವರ ನೆನಪು ಅಚ್ಚಳಿಯದೆ ಉಳಿದಿದೆ ಪಂಚಾಯತ್ ರಾಜ್, ಟೆಲಿಕಾಂ ಮತ್ತು ಐಟಿ ಕ್ರಾಂತಿ ಬಲಪಡಿಸುವುದು ಮತ್ತು ನಿರಂತರ ಶಾಂತಿ ಒಪ್ಪಂದಗಳ0ತಹ ಬಹು ಮಧ್ಯಸ್ಥಿಕೆಗಳ ಮೂಲಕ ರಾಜೀವ್ಗಾಂಧಿ ಭಾರತವನ್ನು ಪರಿವರ್ತಿಸಿದರು ಎಂದರು.
ರಾಜೀವ್ ಗಾಂಧಿ ಹತ್ಯೆಯಗದೆ ನಮ್ಮೊಂದಿಗೆ ಇದ್ದರೆ ದೇಶ ಇನ್ನಷ್ಟು ಬಲಿಷ್ಟವಾಗುವ ಜತೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ಕಾಣಲು ಸಾಧ್ಯವಾಗುತ್ತಿತ್ತು. ದುರಾದೃಷ್ಟ ಸಂಗತಿ ಇಂಥ ಮಹಾ ಮೇಧಾವಿ ನಾಯಕನನ್ನು ಕಳೆದುಕೊಂಡಿರುವುದು ದೇಶದ ದೊಡ್ಡ ದುರಂತ. ನೆಹರು ಹಾಗೂ ಇಂದಿರಾ ಗಾಂಧಿ ಪ್ರಧಾನಿಯಾದಗ ಭಾರತ ಹಲವಾರು ಯುದ್ಧಗಳನ್ನು ಎದುರಿಸಿ ವಿಜಯಶಾಲಿಯಾಗಿದೆ. ಆದರೆ ಅಂದಿನ ಸಮಯದಲ್ಲಿ ಹೆಚ್ಚಾಗಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳು ಇಲ್ಲದಿರುವುದರಿಂದ ಈ ವಿಷಯ ಜನತೆಗೆ ಸಮರ್ಪಕವಾಗಿ ಮುಟ್ಟಿಲ್ಲ ಎಂದರು.
ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷ ವೈ.ಶಿವಕುಮಾರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಸರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ನಗರಸಭೆ ಮಾಜಿ ಅಧ್ಯಕ್ಷೆ ಲಕ್ಷ್ಮೀ ದೇವಮ್ಮ ರಮೇಶ್, ಕಾಂಗ್ರೆಸ್ ಪರಿಶಿಷ್ಟ ಪಂಗಡಗಳ ವಿಭಾಗದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್, ಕಾಂಗ್ರೆಸ್ ಮುಖಂಡರಾದ ಸುರೇಶ್, ಕುರಿಗಳ ರಮೇಶ್, ಫಿರೋಜ್ ಖಾನ್, ವೆಂಕಟಪತಿಯಪ್ಪ, ಕಠಾರಿಪಾಳ್ಯ ಗಂಗಣ್ಣ ಅಮರನಾಥ್, ರಾಜೇಶ್, ವೀರೇಂದ್ರ ಪಾಟೀಲ್, ಚಿನ್ನಾಪುರ ನಾರಾಯಣಸ್ವಾಮಿ, ಕೋಟೆ ಶ್ರೀನಿವಾಸ್, ಮುಂತಾದವರು ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್