ಕಾಡು ಪ್ರಾಣಿಗಳ ಬೇಟೆ ಪ್ರಕರಣ : ಮೂವರು ಆರೋಪಿಗಳ ಬಂಧನ
ಶಿವಮೊಗ್ಗ, 21 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಕಾಡು ಪ್ರಾಣಿಗಳ ಅಕ್ರಮ ಬೇಟೆ ತಡೆ ಕಾರ್ಯಾಚರಣೆಯಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗ
Arrest


ಶಿವಮೊಗ್ಗ, 21 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಕಾಡು ಪ್ರಾಣಿಗಳ ಅಕ್ರಮ ಬೇಟೆ ತಡೆ ಕಾರ್ಯಾಚರಣೆಯಲ್ಲಿ ಜಿಂಕೆ ಜಾತಿಗೆ ಸೇರಿದ ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಮೇ 19ರಂದು ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಸಂಪರ್ಕಿಸುವ ಕಚ್ಚಾ ರಸ್ತೆಯಲ್ಲಿ ದಾಳಿ ನಡೆಸಲಾಯಿತು. ಈ ವೇಳೆ ಕಾಡು ಪ್ರಾಣಿಯನ್ನು ಬೇಟೆಯಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, ಅವರಿಂದ ಜಿಂಕೆ ಜಾತಿಗೆ ಸೇರಿದ ಪ್ರಾಣಿಯ ಕಳೆಬರಹ ಹಾಗೂ ಬೇಟೆಗೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತ ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಕಲ್ಲತ್ತಿಪುರ ಗ್ರಾಮದ ವೆಂಕಟರಮಣ, ತಿರುವಣ್ಣಾಮಲೈ ಜಿಲ್ಲೆಯ ಕುಂಬಳೂರು ಗ್ರಾಮದ ಕನ್ನಿಯಪ್ಪನ್ ಹಾಗೂ ವಲ್ಲಿಯೂರು ಗ್ರಾಮದ ಸುರೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆ ಕರ್ನಾಟಕ ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕಿ ಸಂಗೀತಾ ಜಿ ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ನೆಜ್ಜೂರು ಅವರ ಮಾರ್ಗದರ್ಶನದಲ್ಲಿ ನಡೆಯಿತು.

ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ಬಾಬುದ್ದೀನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ದೇವರಾಜ್, ಕೃಷ್ಣರಾಜ್ ಅರಸ್, ದಿಲೀಪ್, ನಟರಾಜ್, ಹಾಲೇಶ್, ಹೇಮಾವತಿ ಹಾಗೂ ಚಾಲಕ ತಿಮ್ಮಶೆಟ್ಟಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಅರಣ್ಯ ಕಾಯ್ದೆ ಹಾಗೂ ವನ್ಯಜೀವಿ ಸಂರಕ್ಷಣಾ ಕಾಯ್ದೆಗೆ ಸಂಬಂಧಿಸಿದ ಅಕ್ರಮ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ನೀಡಲು ಮಡಿಕೇರಿ ಸಿಐಡಿ ಅರಣ್ಯ ಘಟಕ ಪೊಲೀಸ್ ಅಧೀಕ್ಷಕರ ಕಚೇರಿ ದೂರವಾಣಿ ಸಂಖ್ಯೆ 9480800220 ಹಾಗೂ ಸಾಗರ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ ಕಚೇರಿ ದೂರವಾಣಿ ಸಂಖ್ಯೆ 9480803394 ಅನ್ನು ಸಂಪರ್ಕಿಸಬಹುದು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande