ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಕರ್ನಾಟಕ ಭೇಟಿ
ಬೆಂಗಳೂರು, 23 ಮೇ (ಹಿ.ಸ.): ಆ್ಯಂಕರ್: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕವು ಆತ್ಮೀಯ ಸ್ವಾಗತ ಕೋರಿದೆ. ಈ ಕುರಿತು ಸಾಮಾಜಿಕ
ByV post


ಬೆಂಗಳೂರು, 23 ಮೇ (ಹಿ.ಸ.):

ಆ್ಯಂಕರ್:

ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕವು ಆತ್ಮೀಯ ಸ್ವಾಗತ ಕೋರಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯದಾದ್ಯಂತದ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ಹಿತೈಷಿಗಳ ಪರವಾಗಿ ನಿತಿನ್ ನವೀನ ಅವರನ್ನು ಹೃತ್ಪೂರ್ವಕವಾಗಿ ಬರಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ನಿತಿನ್ ನವೀನ್ ಅವರ ಚುರುಕು ನಾಯಕತ್ವ ಹಾಗೂ ದೂರದೃಷ್ಟಿಯ ಸಂಘಟನಾ ಕಾರ್ಯಪದ್ಧತಿ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ, ಶಕ್ತಿ ಮತ್ತು ದೃಢಸಂಕಲ್ಪವನ್ನು ಮೂಡಿಸಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಅವರ ಮಾರ್ಗದರ್ಶನದಲ್ಲಿ ಬಿಜೆಪಿ ದೇಶದ ವಿವಿಧ ಭಾಗಗಳಲ್ಲಿ ತನ್ನ ಪ್ರಭಾವವನ್ನು ವಿಸ್ತರಿಸಿಕೊಂಡಿದ್ದು, ಜನಬೆಂಬಲವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಜನಾದೇಶ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಹೊಸ ಜನಮತದ ಬೆಂಬಲ ಹಾಗೂ ಕೇರಳದಲ್ಲಿ ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ಪಕ್ಷ ಮಹತ್ವದ ಸಾಧನೆ ಮಾಡಿದೆ ಎಂದು ವಿಜಯೇಂದ್ರ ಉಲ್ಲೇಖಿಸಿದ್ದಾರೆ. ಬಿಜೆಪಿಯ ಬೆಳವಣಿಗೆ ನಿರಂತರವಾಗಿ ವಿಸ್ತರಿಸುತ್ತಿದ್ದು, ಪಕ್ಷದ ಭವಿಷ್ಯ ಇನ್ನಷ್ಟು ಉಜ್ವಲವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಬಿಜೆಪಿ ಸಂಪೂರ್ಣ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪ್ರತಿಯೊಂದು ಮಂಡಲ ಮತ್ತು ಪ್ರತಿಯೊಂದು ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ, ಪಕ್ಷದ ಸಿದ್ಧಾಂತ ಹಾಗೂ ಅಭಿವೃದ್ಧಿ ಚಿಂತನೆಗಳನ್ನು ಮನೆಮನೆಗೂ ತಲುಪಿಸುವ ಕಾರ್ಯದಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ತೊಡಗಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಜನತೆ ಹಾಗೂ ಬಿಜೆಪಿ ಕಾರ್ಯಕರ್ತರ ಪರವಾಗಿ ನಿತಿನ್ ನವೀನ ಅವರಿಗೆ ಸ್ವಾಗತ ಕೋರುತ್ತೇನೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande