ನೇಪಾಳದ ಪಂಚಥರ್ನಲ್ಲಿ ಭಾರಿ ಮಳೆ ಅಬ್ಬರ ; ಪ್ರವಾಹ–ಭೂಕುಸಿತಕ್ಕೆ ಅಪಾರ ಹಾನಿ
ಕಠ್ಮಂಡು, 23 ಮೇ (ಹಿ.ಸ.) : ಆ್ಯಂಕರ್ : ನೇಪಾಳದ ಪಂಚಥರ್ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ವ್ಯಾಪಕ ಹಾನಿ ಸಂಭವಿಸಿದೆ. ಶನಿವಾರ ಮುಂಜಾನೆ ಆರಂಭವಾದ ಪ್ರವಾಹದ ಅಬ್ಬರಕ್ಕೆ ರಸ್ತೆ, ಸೇತುವೆಗಳು, ಕೃಷಿ ಜಮೀನುಗಳು ಮತ್ತು ಮನೆಗಳು ಹಾನಿಗೊಳಗಾಗಿವೆ ಎಂದು ಸ್ಥಳೀಯ ಅಧಿ
Rain landslide


ಕಠ್ಮಂಡು, 23 ಮೇ (ಹಿ.ಸ.) :

ಆ್ಯಂಕರ್ : ನೇಪಾಳದ ಪಂಚಥರ್ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆ ಉಂಟಾದ ಪ್ರವಾಹ ಹಾಗೂ ಭೂಕುಸಿತದಿಂದ ವ್ಯಾಪಕ ಹಾನಿ ಸಂಭವಿಸಿದೆ. ಶನಿವಾರ ಮುಂಜಾನೆ ಆರಂಭವಾದ ಪ್ರವಾಹದ ಅಬ್ಬರಕ್ಕೆ ರಸ್ತೆ, ಸೇತುವೆಗಳು, ಕೃಷಿ ಜಮೀನುಗಳು ಮತ್ತು ಮನೆಗಳು ಹಾನಿಗೊಳಗಾಗಿವೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ಮಧ್ಯಪಹಾಡಿ ಲೋಕಮಾರ್ಗ ಸಂಪೂರ್ಣ ಬಂದ್ ಆಗಿದ್ದು, ಓಯಾಮ್ ಬಜಾರ್ ಸಮೀಪ ಭೂಕುಸಿತ ಸಂಭವಿಸಿದೆ. ಫಲೈಚಾ ಮತ್ತು ಚ್ಯಾಂಗ್ಥಾಪು ಪ್ರದೇಶಗಳ ವಿವಿಧ ಭಾಗಗಳಲ್ಲಿ ಕೃಷಿ ಭೂಮಿಗಳು ಪ್ರವಾಹದ ನೀರಿನಲ್ಲಿ ಕೊಚ್ಚಿಹೋಗಿವೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಚ್ಯಾಂಗ್ಥಾಪು ಪ್ರದೇಶದಲ್ಲಿ ಎರಡು ಮನೆಗಳಿಗೆ ಹಾನಿಯಾಗಿರುವುದಾಗಿ ವರದಿಯಾಗಿದೆ. ಪಂಚಥರ್ನಿಂದ ತಾಪ್ಲೇಜುಂಗ್ಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಇಂದ್ರಾವತಿ ನದಿಯ ಸೇತುವೆಯೂ ಪ್ರವಾಹದ ಹೊಡೆತಕ್ಕೆ ತುತ್ತಾಗಿದೆ. ಇದೇ ರೀತಿ ತಮೋರ್ ಕಾರಿಡಾರ್ನಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಲಿಂಬುನಿ ಸೇತುವೆಗೂ ಹಾನಿಯಾಗಿದೆ.

ಪಕ್ಕದ ತಾಪ್ಲೇಜುಂಗ್ ಜಿಲ್ಲೆಯ ಸಿದಿಂಗ್ಬಾ ಪ್ರದೇಶದಲ್ಲಿಯೂ ಪ್ರವಾಹ ಮತ್ತು ಭೂಕುಸಿತದಿಂದ ಹಾನಿ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಕಾವೇಲಿ ಹಾಗೂ ತಮೋರ್ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ.

ಈ ಕುರಿತು ಮಾಹಿತಿ ನೀಡಿದ ಪಂಚಥರ್ ಜಿಲ್ಲಾ ಪೊಲೀಸ್ ಮುಖ್ಯಸ್ಥ ಅನೀಶ್ ಕರ್ಣ್, ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ, ಸೇತುವೆ ಹಾಗೂ ಬೆಳೆಗಳಿಗೆ ಹಾನಿಯಾಗಿರುವ ವರದಿಗಳು ಬಂದಿದ್ದು, ನಷ್ಟದ ಸಂಪೂರ್ಣ ವಿವರ ಸಂಗ್ರಹಿಸುವ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ.

ಪ್ರವಾಹ ಹಾಗೂ ಭೂಕುಸಿತದಿಂದ ಹಲವು ಪ್ರದೇಶಗಳಲ್ಲಿ ಸಂಚಾರ ವ್ಯತ್ಯಯ ಉಂಟಾಗಿದ್ದು, ಸ್ಥಳೀಯ ಆಡಳಿತ ಮತ್ತು ರಕ್ಷಣಾ ಸಿಬ್ಬಂದಿ ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande