
ಹುಬ್ಬಳ್ಳಿ, 24 ಮೇ (ಹಿ.ಸ.) :
ಆ್ಯಂಕರ್ : ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಚಿತ್ರಗಳನ್ನು ಬಳಸಿ ಅವಹೇಳನಕಾರಿ ಮತ್ತು ಅಪಹಾಸ್ಯಕಾರಿ ಪೋಸ್ಟ್ ಪ್ರಕಟಿಸಿದ ವ್ಯಕ್ತಿಯನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮುಖಂಡರು ಹುಬ್ಬಳ್ಳಿಯ ಸಿ.ಇ.ಎನ್ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಬಿಜೆಪಿ ಹು-ಧಾ ಮಹಾನಗರ ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕರಾದ ಮಹೇಶ ತಪೇಲಾ ಅವರ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಬಿಜೆಪಿ ಮುಖಂಡರು, ದೇಶದ ಪ್ರಧಾನಮಂತ್ರಿ ಹಾಗೂ ವಿದೇಶಿ ರಾಷ್ಟ್ರದ ಪ್ರಧಾನಿಯರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಕಾರಿ ಪೋಸ್ಟ್ಗಳನ್ನು ಹರಡುವುದು ಅಸ್ವೀಕಾರಾರ್ಹವಾಗಿದ್ದು, ಇಂತಹ ಕೃತ್ಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಹು-ಧಾ ಪೂರ್ವ ಮಂಡಲ ಅಧ್ಯಕ್ಷರಾದ ಮಂಜುನಾಥ ಕಾಟ್ಕಕರ್ , ಜಿಲ್ಲಾ ಸಹ-ಸಂಚಾಲಕರಾದ ಬಸವರಾಜ ಬಳಿಗಾರ, ಶ್ರೀನಿವಾಸ ರಾಯ್ಕರ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಅನುಪ ಬಿಜವಾಡ, ರಂಗಾ ಕಠಾರೆ ಸೇರಿದಂತೆ ಹಲವು ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.