ಜನರಿಗೆ ಕಾಂಗ್ರೆಸ್ ವೈಫಲ್ಯ ತಲುಪಿಸಿ : ಬಿಜೆಪಿ ನಾಯಕರಿಗೆ ನಿತಿನ್ ನಬಿನ್ ಸೂಚನೆ
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ಮುಂಬರುವ ಚುನಾವಣೆಗಳಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟನಾ ಬಲವರ್ಧನೆ, ಜನಸಂಪರ್ಕ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅ
Bjp meeting


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ಮುಂಬರುವ ಚುನಾವಣೆಗಳಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಘಟನಾ ಬಲವರ್ಧನೆ, ಜನಸಂಪರ್ಕ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸಲಹೆ ನೀಡಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ತಿಳಿಸಿದ್ದಾರೆ.

ಬೆಂಗಳೂರು ನಗರದ ಜಗನ್ನಾಥ ಭವನದಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಗಳನ್ನು ಜನರ ಮುಂದೆ ಪರಿಣಾಮಕಾರಿಯಾಗಿ ಮಂಡಿಸಿ, ಬಿಜೆಪಿ ವಿಶ್ವಾಸಾರ್ಹ ಪರ್ಯಾಯ ಎಂಬುದನ್ನು ಮನವರಿಕೆ ಮಾಡಿಕೊಡುವ ಜವಾಬ್ದಾರಿ ಪ್ರತಿಯೊಬ್ಬ ಕಾರ್ಯಕರ್ತರ ಮೇಲಿದೆ ಎಂದರು.

ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಅಧಿಕೃತ ಭೇಟಿ ನೀಡಿದ ನಿತಿನ್ ನಬಿನ್ ಅವರು, ಪಕ್ಷದ ಸಂಸದರು, ಶಾಸಕರು, ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖ ಮುಖಂಡರೊಂದಿಗೆ ಸಂವಾದ ನಡೆಸಿದರು. ದೇಶದಾದ್ಯಂತ ಪಕ್ಷದ ಸಂಘಟನಾ ಬಲದಿಂದಲೇ ಇಂದು 22ಕ್ಕೂ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು, 400ಕ್ಕೂ ಹೆಚ್ಚು ಸಂಸದರು ಹಾಗೂ 2000ಕ್ಕೂ ಹೆಚ್ಚು ಶಾಸಕರು ಪಕ್ಷವನ್ನು ಪ್ರತಿನಿಧಿಸುತ್ತಿದ್ದಾರೆ. ಜನರು ಪಕ್ಷದ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಅವರು ತಿಳಿಸಿದರು ಎಂದು ಸಿ.ಟಿ. ರವಿ ಹೇಳಿದರು.

ಪ್ರತಿಯೊಬ್ಬ ನಾಯಕರು ಕಾರ್ಯಕರ್ತರೊಂದಿಗೆ ಆತ್ಮೀಯ ಸಂಬಂಧ ಬೆಳೆಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಜನಪರ ಹೋರಾಟಗಳ ಮೂಲಕ ಪರಿಹಾರ ಕಂಡುಕೊಡುವ ರಾಜಕೀಯವೇ ಪಕ್ಷದ ಗೆಲುವಿಗೆ ದಾರಿ ಮಾಡಿಕೊಡುತ್ತದೆ ಎಂದು ರಾಷ್ಟ್ರೀಯ ಅಧ್ಯಕ್ಷರು ಸೂಚಿಸಿದ್ದಾರೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande