ಬಕ್ರೀದ್ ಹಬ್ಬದ ಹಿನ್ನೆಲೆ ಕೊರಟಗೆರೆಯಲ್ಲಿ ಶಾಂತಿ ಸಭೆ
ತುಮಕೂರು, 24 ಮೇ (ಹಿ.ಸ.) : ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ತುಮಕೂರು ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸಭೆ ಆಯೋಜಿಸಲಾಯಿತು. ಮಧುಗಿರಿ ಉಪವಿಭಾಗದ ಡಿಎಸ್ಪಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಸ್ಥಳೀಯ ಗಣ್ಯರು
Meeting


ತುಮಕೂರು, 24 ಮೇ (ಹಿ.ಸ.) :

ಆ್ಯಂಕರ್ : ಮುಂಬರುವ ಬಕ್ರೀದ್ ಹಬ್ಬದ ಪ್ರಯುಕ್ತ ತುಮಕೂರು ಜಿಲ್ಲೆಯ ಕೊರಟಗೆರೆ ಪೊಲೀಸ್ ಠಾಣೆ ವತಿಯಿಂದ ಶಾಂತಿ ಸಭೆ ಆಯೋಜಿಸಲಾಯಿತು.

ಮಧುಗಿರಿ ಉಪವಿಭಾಗದ ಡಿಎಸ್ಪಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಸ್ಥಳೀಯ ಗಣ್ಯರು ಭಾಗವಹಿಸಿದರು.

ಸಭೆಯಲ್ಲಿ ಬಕ್ರೀದ್ ಹಬ್ಬವನ್ನು ಸರ್ಕಾರದ ಮಾರ್ಗಸೂಚಿ ಹಾಗೂ ಕಾನೂನು ಸುವ್ಯವಸ್ಥೆ ನಿಯಮಾವಳಿಗಳ ಅನ್ವಯ ಶಾಂತಿಯುತವಾಗಿ ಆಚರಿಸುವಂತೆ ಪೊಲೀಸ್ ಅಧಿಕಾರಿಗಳು ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಸಾಮಾಜಿಕ ಸೌಹಾರ್ದತೆ ಕಾಪಾಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಪಾಲಿಸುವುದು ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಸಹಕರಿಸುವಂತೆ ಸಮುದಾಯದ ಮುಖಂಡರಿಗೆ ಮನವಿ ಮಾಡಲಾಯಿತು.

ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕು ಎಂದು ಅಧಿಕಾರಿಗಳು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande