ರಾಹುಲ್ ಗಾಂಧಿ ಹೇಳಿಕೆ ವಿರುದ್ದ ಬಿಜೆಪಿ ತೀವ್ರ ವಾಗ್ದಾಳಿ
ನವದೆಹಲಿ, 24 ಮೇ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು “ಮುಂದಿನ ಒಂದು ವರ್ಷದೊಳಗೆ ಮೋದಿ ಸರ್ಕಾರ ಪತನವಾಗಲಿದೆ” ಎಂಬ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಹುಲ್ ಗಾ
ರಾಹುಲ್ ಗಾಂಧಿ


ನವದೆಹಲಿ, 24 ಮೇ (ಹಿ.ಸ.) :

ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು “ಮುಂದಿನ ಒಂದು ವರ್ಷದೊಳಗೆ ಮೋದಿ ಸರ್ಕಾರ ಪತನವಾಗಲಿದೆ” ಎಂಬ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಹುಲ್ ಗಾಂಧಿ ಹೇಳಿಕೆಯನ್ನು ದೇಶದಲ್ಲಿ ಅರಾಜಕತೆ ಸೃಷ್ಟಿಸುವ ಸಂಚಿನ ಭಾಗವೆಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಹಾಗೂ ಪ್ರತಿ ಪಕ್ಷಗಳು ಪ್ರಜಾಪ್ರಭುತ್ವದ ಮಾರ್ಗದಲ್ಲಿ ಬಿಜೆಪಿಯನ್ನು ಸೋಲಿಸಲು ವಿಫಲವಾಗಿರುವುದರಿಂದ ಈಗ ದೇಶದಲ್ಲಿ ಅಸ್ಥಿರತೆ ಹುಟ್ಟುಹಾಕಲು ಯತ್ನಿಸುತ್ತಿವೆ ಎಂದು ಅವರು ಟೀಕಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಜನರ ಮನಸಿನಿಂದ ದೂರ ಮಾಡಲು ಸಾಧ್ಯವಿಲ್ಲ. ದೇಶದ ಜನರು ಕಾಂಗ್ರೆಸ್ನ ರಾಜಕೀಯವನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ ಎಂದು ಪಿಯೂಷ್ ಗೋಯಲ್ ಹೇಳಿದರು.

ಬಿಜೆಪಿ ನಾಯಕ ಸೈಯದ್ ಶಾಹನವಾಜ್ ಹುಸೇನ್ ಪ್ರತಿಕ್ರಿಯಿಸಿ, ಇದು ಪ್ರಜಾಪ್ರಭುತ್ವದ ಮೂಲಕ ಆಯ್ಕೆಯಾದ ಸರ್ಕಾರ ಎಂಬುದನ್ನು ರಾಹುಲ್ ಗಾಂಧಿ ಅರಿತುಕೊಳ್ಳಬೇಕು ಎಂದು ಹೇಳಿದರು. ಪ್ರಧಾನಿ ಮೋದಿ ದೇಶದ ಅಭಿವೃದ್ಧಿಗಾಗಿ ಹಗಲು-ರಾತ್ರಿ ಶ್ರಮಿಸುತ್ತಿದ್ದಾರೆ. ರಾಹುಲ್ ಗಾಂಧಿ ಇದಕ್ಕೂ ಮೊದಲು ಅನೇಕ ದೊಡ್ಡ ಹೇಳಿಕೆಗಳನ್ನು ನೀಡಿದ್ದಾರೆ, ಆದರೆ ಅವುಗಳಿಗೆ ಯಾವುದೇ ಪರಿಣಾಮ ಉಂಟಾಗಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಘ್ ಕೆಲ ನಾಯಕರು ವಿದೇಶಿ ಶಕ್ತಿಗಳ ಪ್ರೇರಣೆಯಿಂದ ದೇಶ ವಿರೋಧಿ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ತನ್ನ ಸಿದ್ಧಾಂತ ಮತ್ತು ಗುರುತಿನೊಂದಿಗೆ ತಾತ್ಸಾರ ಮಾಡಿಕೊಂಡಿದೆ ಎಂದು ಅವರು ಟೀಕಿಸಿದರು.

ಕೇಂದ್ರ ಸಚಿವ ಸೂಕಾಂತ ಮಜುಂದಾರ್ ರಾಹುಲ್ ಗಾಂಧಿ ಹೇಳಿಕೆಯನ್ನು ಮಹತ್ವವಿಲ್ಲದದ್ದು ಎಂದು ಹೇಳಿ, ಅವರು ಯಾವಾಗ ಏನು ಮಾತನಾಡುತ್ತಾರೆ ಎಂಬುದು ಅವರ ಪಕ್ಷದವರಿಗೂ ತಿಳಿದಿರುವುದಿಲ್ಲ ಎಂದು ವ್ಯಂಗ್ಯವಾಡಿದರು.

ಉಲ್ಲೇಖನೀಯವಾಗಿ, ಕಾಂಗ್ರೆಸ್ ಅಲ್ಪಸಂಖ್ಯಾತ ಸಲಹಾ ಸಮಿತಿಯ ಸಭೆಯಲ್ಲಿ ರಾಹುಲ್ ಗಾಂಧಿ ಮುಂದಿನ ಒಂದು ವರ್ಷದೊಳಗೆ ಮೋದಿ ಸರ್ಕಾರ ಕುಸಿಯಲಿದೆ ಎಂದು ಹೇಳಿದ್ದರು. ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾಧಾನ ಇದಕ್ಕೆ ಪ್ರಮುಖ ಕಾರಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು. ಸಭೆಯಲ್ಲಿ ಕಾಂಗ್ರೆಸ್ ನಾಯಕ ಇಮ್ರಾನ್ ಮಸೂದ್ ಮುಸ್ಲಿಂ ಮತದಾರರ ನಡುವೆ ಪಕ್ಷದ ಸಂದೇಶವನ್ನು ಪರಿಣಾಮಕಾರಿಯಾಗಿ ತಲುಪಿಸುವ ಅಗತ್ಯವಿದೆ ಎಂದು ಹೇಳಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande