ರಾಜ್ಯ ಬಿಜೆಪಿ ಸಂಘಟನಾ ಸಭೆ
ಬೆಂಗಳೂರು, 24 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ನಿತಿನ್ ನಬಿನ್ ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಮಹತ್ವದ
Meeting


ಬೆಂಗಳೂರು, 24 ಮೇ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿದ ನಿತಿನ್ ನಬಿನ್ ಅವರೊಂದಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಮಹತ್ವದ ಸಂಘಟನಾ ಸಭೆಯಲ್ಲಿ ಭಾಗವಹಿಸಿದರು.

ರಾಜ್ಯದ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ವಿವಿಧ ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬುವ ಉದ್ದೇಶದಿಂದ ಮುಂದಿನ ರಾಜಕೀಯ ಕಾರ್ಯತಂತ್ರ, ರಾಜ್ಯ ಮಟ್ಟದ ಕಾರ್ಯಕ್ರಮಗಳು ಹಾಗೂ ಕಾರ್ಯಕರ್ತರ ಸಮನ್ವಯದ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕರ್ನಾಟಕಕ್ಕೆ ನೀಡಿದ ಮೊದಲ ಭೇಟಿಗೆ ಪಕ್ಷದ ನಾಯಕರೂ ಹಾಗೂ ಕಾರ್ಯಕರ್ತರೂ ಭಾರೀ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಸಹ ಉಸ್ತುವಾರಿ ಪೊಂಗುಲೆಟಿ ಸುಧಾಕರ್ ರೆಡ್ಡಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಹಿರಿಯ ನಾಯಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande