ನದಿಯ ಹೊಂಡದ ಭಾಗವೇ ದುರಂತಕ್ಕೆ ಕಾರಣ : ಮಂಕಾಳ ವೈದ್ಯ
ಕಾರವಾರ, 24 ಮೇ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ತೆರಳಿದ್ದವರ ಮೇಲೆ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಈ ಘಟನೆ ಇಡೀ ಜಿಲ್ಲೆಯನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ. ಘಟನೆಯ ಕು
ನದಿಯ ಹೊಂಡದ ಭಾಗವೇ ದುರಂತಕ್ಕೆ ಕಾರಣ : ಮಂಕಾಳ ವೈದ್ಯ


ಕಾರವಾರ, 24 ಮೇ (ಹಿ.ಸ.) :

ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ತೆರಳಿದ್ದವರ ಮೇಲೆ ಸಂಭವಿಸಿದ ಭೀಕರ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಈ ಘಟನೆ ಇಡೀ ಜಿಲ್ಲೆಯನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಸಚಿವ ಮಂಕಾಳ ಎಸ್ ವೈದ್ಯ, ಭಟ್ಕಳದಲ್ಲಿ ಇದೇ ಮೊದಲ ಬಾರಿಗೆ ಇಂತಹ ದೊಡ್ಡ ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 13 ಮಂದಿ ನದಿಗೆ ಇಳಿದಿದ್ದರು. ಅದರಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಳಿಕ ಮತ್ತೊಬ್ಬರ ಮೃತದೇಹ ಪತ್ತೆಯಾಗಿರುವ ಹಿನ್ನೆಲೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದರು.

ಮೃತರೆಲ್ಲರೂ ಒಂದೇ ಕುಟುಂಬದವರಲ್ಲ. ಆದರೆ ಒಂದೇ ಕುಟುಂಬದ ಇಬ್ಬರು ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದರು.

ಕಪ್ಪೆಚಿಪ್ಪು ತೆಗೆಯುವ ವೇಳೆ ನದಿಯ ಆಳವಾದ ಹೊಂಡದ ಭಾಗಕ್ಕೆ ತೆರಳಿದ್ದರಿಂದ ಈ ಅವಘಡ ಸಂಭವಿಸಿದೆ. ಸಾಮಾನ್ಯವಾಗಿ ಈ ಪ್ರದೇಶದಲ್ಲಿ ಇಂತಹ ಅನಾಹುತಗಳು ಸಂಭವಿಸಿರಲಿಲ್ಲ. ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದ ದುರಂತ ಸಂಭವಿಸಿರುವುದು ಬೇಸರದ ಸಂಗತಿ ಎಂದು ಸಚಿವರು ಹೇಳಿದರು.

ಘಟನೆ ಕುರಿತು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ರಕ್ಷಣಾ ಮತ್ತು ಶೋಧ ಕಾರ್ಯಾಚರಣೆ ಮುಂದುವರಿದಿದೆ. ಮೃತರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಮಂಕಾಳ ಎಸ್ ವೈದ್ಯ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande