ಪ್ರವಾಸೋದ್ಯಮ ಕ್ಷೇತ್ರದ ಉತ್ತೇಜನಕ್ಕೆ ಹೊಸ ಹೆಜ್ಜೆ
ಗದಗ, 25 ಮೇ (ಹಿ.ಸ.) : ಆ್ಯಂಕರ್ : ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ, ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಒದಗಿಕೆ ಹಾಗೂ ಸ್ಥಳೀಯ ಉದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸೋ
ಫೋಟೋ


ಗದಗ, 25 ಮೇ (ಹಿ.ಸ.) :

ಆ್ಯಂಕರ್ : ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ, ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಒದಗಿಕೆ ಹಾಗೂ ಸ್ಥಳೀಯ ಉದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸೋಮವಾರ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡುತ್ತಿದ್ದು, ಪ್ರವಾಸಿಗರಿಗೆ ಗುಣಮಟ್ಟದ ಸೇವೆ ಮತ್ತು ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ವಾಹನವು ವಿವಿಧ ಕಾರ್ಯಕ್ರಮಗಳು, ಪ್ರವಾಸಿ ತಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸೇವೆ ಒದಗಿಸುವ ಮೂಲಕ ಜನರಿಗೆ ಅನುಕೂಲವಾಗಲಿದೆ. ಇದರ ಮೂಲಕ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ದೊರೆಯಲಿದ್ದು, ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಹಾಗೂ ಸ್ವಯಂ ಉದ್ಯೋಗ ಅವಕಾಶಗಳಿಗೂ ಪ್ರೋತ್ಸಾಹ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸರ್ಕಾರದ ವಿವಿಧ ಇಲಾಖೆಗಳು ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಈ ಹೊಸ ಉಪಕ್ರಮವು ಸಾರ್ವಜನಿಕ ಸೇವೆ ವಿಸ್ತರಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಪ್ರವಾಸಿಗರ ಅಗತ್ಯತೆಗಳಿಗೆ ತಕ್ಷಣದ ಸೇವೆ ಒದಗಿಸುವ ವ್ಯವಸ್ಥೆಯಾಗಿ ಮೊಬೈಲ್ ಕ್ಯಾಂಟೀನ್ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ನೀಲವ್ವ ಬೋಳನವರ, ಮಾಜಿ ಶಾಸಕ ರಾಮಣ್ಣ ಲಮಾಣಿ, ಪಾರುಕ್ ಹುಬ್ಬಳ್ಳಿ ಸೇರಿದಂತೆ ಹಲವು ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ್ ವಿಭೂತಿ ಉಪಸ್ಥಿತರಿದ್ದರು.

ಕಾರ್ಯಕ್ರಮವು ಸರಳವಾಗಿ ನಡೆದಿದ್ದು, ಮೊಬೈಲ್ ಕ್ಯಾಂಟೀನ್ ವಾಹನ ಚಾಲನೆಗೆ ಚಾಲನೆ ದೊರೆತ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಹೊಸ ಉತ್ತೇಜನ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಉಪಕ್ರಮಗಳು ಇನ್ನಷ್ಟು ಪರಿಣಾಮಕಾರಿ ಆಗಲಿ ಎಂಬ ಆಶಯವನ್ನು ಭಾಗವಹಿಸಿದ್ದ ಗಣ್ಯರು ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande