ಚಾಮರಾಜನಗರದಲ್ಲಿ ಜಿಲ್ಲಾ ಮಟ್ಟದ ರೌಡಿ ಪೆರೇಡ್
ಚಾಮರಾಜನಗರ, 25 ಮೇ (ಹಿ.ಸ.) : ಆ್ಯಂಕರ್ : ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದ ರೌಡಿ ಪೆರೇಡ್ ಆಯೋಜಿಸಿ, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು. ಪೆರೇಡ್ನಲ್ಲಿ ಭ
rowdy parade


ಚಾಮರಾಜನಗರ, 25 ಮೇ (ಹಿ.ಸ.) :

ಆ್ಯಂಕರ್ : ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಚಾಮರಾಜನಗರ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಮಟ್ಟದ ರೌಡಿ ಪೆರೇಡ್ ಆಯೋಜಿಸಿ, ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯ ರೌಡಿಶೀಟರ್ಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.

ಪೆರೇಡ್ನಲ್ಲಿ ಭಾಗವಹಿಸಿದ್ದ ರೌಡಿಶೀಟರ್ಗಳಿಗೆ ಯಾವುದೇ ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಹಾಗೂ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಕೃತ್ಯಗಳಿಂದ ದೂರವಿರಲು ಪೊಲೀಸರು ಎಚ್ಚರಿಕೆ ನೀಡಿದರು.

ಸನ್ನಡತೆಯಿಂದ ಸಮಾಜದಲ್ಲಿ ಬದುಕುವಂತೆ ಸಲಹೆ ನೀಡಿದ ಪೊಲೀಸ್ ಅಧಿಕಾರಿಗಳು, ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿರಂತರ ನಿಗಾವಹಿಸುತ್ತಿದ್ದು, ಸಮಾಜದಲ್ಲಿ ಭದ್ರತೆ ಮತ್ತು ಕಾನೂನು ಪಾಲನೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande