
ಗದಗ, 25 ಮೇ (ಹಿ.ಸ.) :
ಆ್ಯಂಕರ್ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಪತ್ರಿಕಾ ವಾಹನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಸರ್ಕಾರದ ಯೋಜನೆಗಳು, ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಹಿತಾಸಕ್ತಿ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಇಲಾಖೆಗೆ ನೂತನ ಪತ್ರಿಕಾ ವಾಹನ ಸೇರ್ಪಡೆಯಾಗಿರುವುದು ಮಾಹಿತಿ ಪ್ರಸಾರ ಕಾರ್ಯಕ್ಕೆ ಮತ್ತಷ್ಟು ಬಲ ತುಂಬಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ನೀಲವ್ವ ಬೋಳನವರ, ಮಾಜಿ ಶಾಸಕ ರಾಮಣ್ಣ ಲಮಾಣಿ, ಪಾರುಕ್ ಹುಬ್ಬಳ್ಳಿ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ನೂತನ ವಾಹನ ಚಾಲನೆ ಕಾರ್ಯಕ್ರಮವು ಸರಳವಾಗಿ ನಡೆದಿದ್ದು, ಇಲಾಖೆಯ ಮಾಹಿತಿ ಪ್ರಸಾರ ಕಾರ್ಯಕ್ಕೆ ಹೊಸ ಚೈತನ್ಯ ತುಂಬುವ ನಿರೀಕ್ಷೆ ವ್ಯಕ್ತವಾಯಿತು.
ಹಿಂದೂಸ್ತಾನ್ ಸಮಾಚಾರ್ / lalita MP