ಮೋದಿ ಮತ್ತು ಅಮಿತ್ ಶಾ ವಿರುದ್ಧ ಹೇಳಿಕೆ ; ಕಾನೂನು ಸಂಕಷ್ಟದಲ್ಲಿ ರಾಹುಲ್ ಗಾಂಧಿ
ರಾಯಬರೇಲಿ, 26 ಮೇ (ಹಿ.ಸ.) : ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆ ವಿಚಾರವಾಗಿ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬಿಜೆಪಿ ಮುಖಂಡ ಶಕೀಲ್ ಅಹ್ಮದ್ ಖಾನ್ ರಾಯಬರೇ
ರಾಹುಲ್ ಗಾಂಧಿ


ರಾಯಬರೇಲಿ, 26 ಮೇ (ಹಿ.ಸ.) :

ಆ್ಯಂಕರ್ : ಲೋಕ ಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆ ವಿಚಾರವಾಗಿ ಮತ್ತೊಮ್ಮೆ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಸಂಬಂಧ ಬಿಜೆಪಿ ಮುಖಂಡ ಶಕೀಲ್ ಅಹ್ಮದ್ ಖಾನ್ ರಾಯಬರೇಲಿ ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ.

ರಾಯಬರೇಲಿಯ ಪಂಚಮ ಅಪರ ಸಿವಿಲ್ ಜಡ್ಜ್ (ಜೂನಿಯರ್ ಡಿವಿಷನ್) ವಿನಯಶೀಲ ಅವರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದ್ದು, ನ್ಯಾಯಾಲಯವು ದೂರನ್ನು ಸ್ವೀಕರಿಸಿ ಜೂನ್ 16ರಂದು ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿದೆ.

ದೂರುದಾರ ಶಕೀಲ್ ಅಹ್ಮದ್ ಖಾನ್ ಅವರ ಪ್ರಕಾರ, ರಾಹುಲ್ ಗಾಂಧಿ ಪ್ರತೀಕಾರದ ಮನೋಭಾವದಿಂದ ದೇಶದ ಪ್ರಧಾನಿ ಮತ್ತು ಗೃಹ ಸಚಿವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದರಿಂದ ತಮ್ಮ ಮನಸ್ಸಿಗೆ ನೋವಾಗಿದ್ದು, ಬಿಜೆಪಿ ಪಕ್ಷದ ಹಾಗೂ ನಾಯಕರ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸಾರ್ವಜನಿಕ ವೇದಿಕೆಯಲ್ಲಿ ನೀಡಿದ ಹೇಳಿಕೆಗಳ ಮೂಲಕ ದೇಶದ ವಾತಾವರಣ ಹಾಳುಮಾಡುವ ಪ್ರಯತ್ನ ನಡೆದಿದೆ ಹಾಗೂ ಪ್ರಧಾನಿ, ಗೃಹ ಸಚಿವ ಮತ್ತು ಬಿಜೆಪಿಯ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಮಟ್ಟದಲ್ಲಿ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ತಾವು ಜನಪ್ರತಿನಿಧಿ ನ್ಯಾಯಾಲಯದ ಮೊರೆ ಹೋಗಿದ್ದಾಗಿ ಶಕೀಲ್ ಅಹ್ಮದ್ ಖಾನ್ ತಿಳಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಲು ಆದೇಶ ನೀಡುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande