
ಬೆಂಗಳೂರು, 26 ಮೇ (ಹಿ.ಸ.) :
ಆ್ಯಂಕರ್ : ‘ಬಾಲನ್ ದಿ ಬಾಯ್’ ಚಿತ್ರದ ಆಂಧ್ರಪ್ರದೇಶ ಹಾಗೂ ತೆಲಂಗಾಣ ಬಿಡುಗಡೆಗಾಗಿ ಅನ್ನಪೂರ್ಣ ಸ್ಟುಡಿಯೋಸ್ ಜೊತೆ ಕೈಜೋಡಿಸಿರುವುದಾಗಿ ಕೆವಿಎನ್ ಪ್ರೊಡಕ್ಷನ್ಸ್ ಘೋಷಿಸಿದೆ.
ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ನಿರ್ಮಾಣ ಸಂಸ್ಥೆ, “ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ‘ಬಾಲನ್ ದಿ ಬಾಯ್’ ಚಿತ್ರವನ್ನು ಬಿಡುಗಡೆ ಮಾಡಲು ಅನ್ನಪೂರ್ಣ ಸ್ಟುಡಿಯೋಸ್ ಜೊತೆ ಸಹಭಾಗಿತ್ವ ಮಾಡುತ್ತಿರುವುದು ಸಂತಸದ ಸಂಗತಿ” ಎಂದು ತಿಳಿಸಿದೆ.
ಚಿತ್ರವು 2026ರ ಜೂನ್ 19ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಮೂಡಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.