ಕಾಣೆಯಾದ ಮಕ್ಕಳ ಪತ್ತೆ ಪ್ರಕರಣಗಳ ಕುರಿತು ಮಂಡ್ಯದಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಂಡ್ಯ, 26 ಮೇ (ಹಿ.ಸ.) : ಆ್ಯಂಕರ್ : ಮಂಡ್ಯ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಕ್ಕಳು ಕಾಣೆಯಾದ ಹಾಗೂ ಅಪಹರಣಕ್ಕೊಳಗಾದ ಪ್ರಕರಣಗಳಲ್ಲಿ ಇನ್ನೂ ಪತ್ತೆಯಾಗದೇ ಬಾಕಿ ಇರುವ ಪ್ರಕರಣಗಳ ಕುರಿತು ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾ
Meeting


ಮಂಡ್ಯ, 26 ಮೇ (ಹಿ.ಸ.) :

ಆ್ಯಂಕರ್ : ಮಂಡ್ಯ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಮಕ್ಕಳು ಕಾಣೆಯಾದ ಹಾಗೂ ಅಪಹರಣಕ್ಕೊಳಗಾದ ಪ್ರಕರಣಗಳಲ್ಲಿ ಇನ್ನೂ ಪತ್ತೆಯಾಗದೇ ಬಾಕಿ ಇರುವ ಪ್ರಕರಣಗಳ ಕುರಿತು ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಎಂ. ಆನಂದ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ. ಐಪಿಎಸ್, ಅಪರ ಪೊಲೀಸ್ ಅಧೀಕ್ಷಕರಾದ ಗಂಗಾಧರಸ್ವಾಮಿ ಎಸ್.ಇ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಕಾಣೆಯಾದ ಮಕ್ಕಳ ಪತ್ತೆ ಕಾರ್ಯಾಚರಣೆಗಳ ಪ್ರಗತಿ, ತನಿಖೆಯ ಸ್ಥಿತಿ ಹಾಗೂ ಇನ್ನೂ ಬಾಕಿ ಇರುವ ಪ್ರಕರಣಗಳನ್ನು ಶೀಘ್ರ ಪತ್ತೆಹಚ್ಚಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರ ಚರ್ಚೆ ನಡೆಯಿತು.

ಈ ಸಂದರ್ಭದಲ್ಲಿ ಕಾಣೆಯಾದ ಮಕ್ಕಳ ಪತ್ತೆ ಪ್ರಕರಣಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande