
ಮೈಸೂರು, 26 ಮೇ (ಹಿ.ಸ.) :
ಆ್ಯಂಕರ್ : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಘನ ತ್ಯಾಜ್ಯ ವಸ್ತು ನಿರ್ವಹಣೆ ನಿಯಮ-2026 ಕುರಿತು ಪಾಲಿಕೆ ಅಧಿಕಾರಿಗಳಿಗೆ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಯಪಾಲಕ ಅಭಿಯಂತರರು (ಪರಿಸರ), ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ), ಪರಿಸರ ಅಭಿಯಂತರರು ಹಾಗೂ ಆರೋಗ್ಯ ನಿರೀಕ್ಷಕರಿಗೆ ಘನ ತ್ಯಾಜ್ಯ ವಸ್ತುಗಳ ಸಮರ್ಪಕ ನಿರ್ವಹಣೆ, ವಿಂಗಡಣೆ, ಸಂಗ್ರಹಣೆ ಹಾಗೂ ವೈಜ್ಞಾನಿಕ ವಿಲೇವಾರಿ ಕುರಿತಂತೆ ಮಾಹಿತಿ ನೀಡಲಾಯಿತು.
ನಗರ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಘನ ತ್ಯಾಜ್ಯ ನಿರ್ವಹಣೆಯು ಅತ್ಯಂತ ಪ್ರಮುಖವಾಗಿದ್ದು, ಹೊಸ ನಿಯಮಾವಳಿಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಸಾಮರ್ಥ್ಯ ವೃದ್ಧಿಗೆ ಈ ತರಬೇತಿ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.
ನಗರದಲ್ಲಿ ಸ್ವಚ್ಛತೆ ಕಾಪಾಡುವುದು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಪರಿಸರ ಸ್ನೇಹಿ ತ್ಯಾಜ್ಯ ನಿರ್ವಹಣಾ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ಪಾಲಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ತಿಳಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.