ನಾಲ್ಕು ರಾಜ್ಯಗಳಲ್ಲಿ ನೂತನ ಬಿಜೆಪಿ ಅಧ್ಯಕ್ಷರ ನೇಮಕ
ನವದೆಹಲಿ, 28 ಮೇ (ಹಿ.ಸ.) : ಆ್ಯಂಕರ್ : ಬಿಜೆಪಿ ಮಹತ್ವದ ಸಂಘಟನಾ ಬದಲಾವಣೆ ನಡೆಸಿದ್ದು, ದೆಹಲಿ, ಹರಿಯಾಣ, ಪಂಜಾಬ್ ಹಾಗೂ ತ್ರಿಪುರಾ ರಾಜ್ಯಗಳಿಗೆ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಪಕ್ಷ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಎಲ್ಲಾ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ. ದೆ
ನಾಲ್ಕು ರಾಜ್ಯಗಳಲ್ಲಿ ನೂತನ ಬಿಜೆಪಿ ಅಧ್ಯಕ್ಷರ ನೇಮಕ


ನವದೆಹಲಿ, 28 ಮೇ (ಹಿ.ಸ.) :

ಆ್ಯಂಕರ್ : ಬಿಜೆಪಿ ಮಹತ್ವದ ಸಂಘಟನಾ ಬದಲಾವಣೆ ನಡೆಸಿದ್ದು, ದೆಹಲಿ, ಹರಿಯಾಣ, ಪಂಜಾಬ್ ಹಾಗೂ ತ್ರಿಪುರಾ ರಾಜ್ಯಗಳಿಗೆ ಹೊಸ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಪಕ್ಷ ಬಿಡುಗಡೆ ಮಾಡಿದ ಅಧಿಕೃತ ಪ್ರಕಟಣೆಯ ಪ್ರಕಾರ, ಎಲ್ಲಾ ನೇಮಕಾತಿಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ದೆಹಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಕೇಂದ್ರ ರಾಜ್ಯ ಸಚಿವ ಹರ್ಷ್ ಮಲ್ಹೋತ್ರಾ ಅವರನ್ನು ನೇಮಕ ಮಾಡಲಾಗಿದೆ. ಹರಿಯಾಣದಲ್ಲಿ ಮಹಿಳಾ ನಾಯಕಿ ಅರ್ಚನಾ ಗುಪ್ತಾ ಅವರಿಗೆ ರಾಜ್ಯಾಧ್ಯಕ್ಷೆಯ ಜವಾಬ್ದಾರಿ ನೀಡಲಾಗಿದೆ.

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಬಿಜೆಪಿಯಲ್ಲೂ ಪಕ್ಷ ಸಂಘಟನಾ ಬದಲಾವಣೆ ಮಾಡಿದೆ.

ಪಂಜಾಬ್ ಬಿಜೆಪಿ ಅಧ್ಯಕ್ಷರಾಗಿ ಕೇವಲ್ ಸಿಂಗ್ ಧಿಲ್ಲೋನ್ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ, ತ್ರಿಪುರಾದಲ್ಲಿ ಶಾಸಕ ಅಭಿಷೇಕ್ ಡೆಬ್ರಾಯ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲಾಗಿದೆ.

ಪಕ್ಷದ ಪ್ರಕಟಣೆಯಲ್ಲಿ, ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಈ ನೇಮಕಾತಿಗಳಿಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಲಾಗಿದೆ. ಹೊಸ ರಾಜ್ಯಾಧ್ಯಕ್ಷರು ಪಕ್ಷ ಸಂಘಟನೆಯನ್ನು ಬಲಪಡಿಸಿ, ಮುಂಬರುವ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಲು ಪ್ರಮುಖ ಪಾತ್ರವಹಿಸಲಿದ್ದಾರೆ ಎಂಬ ವಿಶ್ವಾಸವನ್ನು ಬಿಜೆಪಿ ನಾಯಕತ್ವ ವ್ಯಕ್ತಪಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande