
ಬೆಂಗಳೂರು, 28 ಮೇ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುವ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
“ಹೈಕಮಾಂಡ್ ರಾಜ್ಯ ಸಭೆಗೆ ಹೋಗಿ ಎಂದು ಹೇಳಿತ್ತು. ಆದರೆ ನಾನು ಬಹಳ ವಿನಮ್ರವಾಗಿ ‘ಆಗಲ್ಲ’ ಎಂದು ಹೇಳಿದ್ದೇನೆ. ರಾಷ್ಟ್ರ ರಾಜಕಾರಣದಲ್ಲಿ ನನಗೆ ಯಾವುದೇ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದರು.
ರಾಜ್ಯದ ಜನತೆ ತಮ್ಮನ್ನು ಐದು ವರ್ಷಗಳ ಅವಧಿಗೆ ಶಾಸಕರಾಗಿ ಆಯ್ಕೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, “ಇನ್ನೂ ಎರಡು ವರ್ಷ ಅವಧಿ ಬಾಕಿಯಿದೆ. ಅಲ್ಲಿವರೆಗೆ ಕರ್ನಾಟಕದ ಜನತೆ ಹಾಗೂ ನನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ” ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.