
ಗದಗ, 28 ಮೇ (ಹಿ.ಸ.) :
ಆ್ಯಂಕರ್ : ಹಿಂದೂ ಸರ್ವ ಸಮಾಜಗಳ ಒಕ್ಕೂಟ ವತಿಯಿಂದ ಆಯೋಜಿಸಲಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದ ಅಂಗವಾಗಿ ಗದಗ-ಬೆಟಗೇರಿ ನಗರದ ಎಪಿಎಂಸಿ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಮಾವೇಶದ ಅಧ್ಯಕ್ಷರಾದ ವಸಂತಗೌಡ ಪೊಲೀಸ್ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಸಮಾಜಗಳ ಜಿಲ್ಲಾಧ್ಯಕ್ಷರು, ಪ್ರಮುಖರು, ಮುಖಂಡರು ಹಾಗೂ ನಾನಾ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಸಮಾವೇಶದ ರೂಪರೇಷೆಗಳು, ಕಾರ್ಯಕ್ರಮದ ಸಿದ್ಧತೆಗಳು, ವ್ಯವಸ್ಥಾಪನಾ ಕಾರ್ಯಗಳು ಹಾಗೂ ನಾನಾ ಸಮಾಜ ಮತ್ತು ಸಂಘಟನೆಗಳ ಸಹಭಾಗಿತ್ವ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಲಾಯಿತು. ಸಮಾವೇಶವನ್ನು ಯಶಸ್ವಿಯಾಗಿ ಆಯೋಜಿಸಲು ಕೈಗೊಳ್ಳಬೇಕಾದ ಕ್ರಮಗಳು, ಜನಸಹಭಾಗಿತ್ವ ಹೆಚ್ಚಿಸುವ ಬಗ್ಗೆ ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ಅಭಿಪ್ರಾಯ ವಿನಿಮಯ ನಡೆಯಿತು.
ಈ ಸಂದರ್ಭದಲ್ಲಿ ಪೂಜ್ಯ ಪುರೋಹಿತರು, ಸಮಾಜದ ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದು, ಸಮಾವೇಶವು ಶಾಂತಿಯುತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಅಗತ್ಯ ಸಲಹೆ–ಸೂಚನೆಗಳನ್ನು ನೀಡಿದರು.
ಬಸವಾದಿ ಶಿವಶರಣರ ಆದರ್ಶ, ಧಾರ್ಮಿಕ ಹಾಗೂ ಸಾಮಾಜಿಕ ಮೌಲ್ಯಗಳ ಸಂದೇಶವನ್ನು ಸಮಾಜದೊಳಗೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ಬೃಹತ್ ಸಮಾವೇಶಕ್ಕೆ ಎಲ್ಲಾ ಸಮಾಜದ ಜನರು ಸಹಕರಿಸಬೇಕೆಂದು ಸಭೆಯಲ್ಲಿ ಕರೆ ನೀಡಲಾಯಿತು.
ಹಿಂದೂಸ್ತಾನ್ ಸಮಾಚಾರ್ / lalita MP