ದೆಹಲಿ ವಿವೇಕ್ ವಿಹಾರ್ ಅಗ್ನಿ ಅವಘಡ : ಕೇಂದ್ರ ಸಚಿವರಿಂದ ಸಂತಾಪ
ನವದೆಹಲಿ, 03 ಮೇ (ಹಿ.ಸ.) : ಆ್ಯಂಕರ್ : ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ದುರ್ಮರಣಕ್ಕೀಡಾಗಿರುವ ದುರ್ಘಟನೆ ನಡೆದಿದೆ. ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಈ ಅನಾಹುತ ಸಂಭವಿಸಿದೆ.
ಕೇಂದ್ರ ಸಚಿವರು


ನವದೆಹಲಿ, 03 ಮೇ (ಹಿ.ಸ.) :

ಆ್ಯಂಕರ್ : ರಾಷ್ಟ್ರ ರಾಜಧಾನಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಒಂಬತ್ತು ಜನರು ದುರ್ಮರಣಕ್ಕೀಡಾಗಿರುವ ದುರ್ಘಟನೆ ನಡೆದಿದೆ. ನಾಲ್ಕು ಅಂತಸ್ತಿನ ವಸತಿ ಕಟ್ಟಡದಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಈ ಅನಾಹುತ ಸಂಭವಿಸಿದೆ.

ಈ ದುರಂತದ ಬಗ್ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಅವರು, “ದೆಹಲಿಯ ವಿವೇಕ್ ವಿಹಾರದಲ್ಲಿ ಸಂಭವಿಸಿದ ಭಾರೀ ಬೆಂಕಿಯಿಂದಾದ ಜೀವಹಾನಿ ತುಂಬಾ ದುಃಖಕರ. ದುಃಖಿತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ” ಎಂದು ತಿಳಿಸಿದ್ದಾರೆ.

ಅದೇ ವೇಳೆ, ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಹರ್ಷ್ ಮಲ್ಹೋತ್ರಾ ಕೂಡ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಹುತೇಕ ಗಾಯಾಳುಗಳನ್ನು ಇಂದು ಸಂಜೆ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಹರಸಾಹಸ ಪಟ್ಟವು. ಬೆಂಕಿ ಕಾಣಿಸಿಕೊಂಡ ಕಾರಣ ಹಾಗೂ ಹೆಚ್ಚಿನ ಮಾಹಿತಿ ಕುರಿತು ತನಿಖೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande