ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲ ಭೇದಿಸಿದ ಪಂಜಾಬ್ ಪೋಲಿಸ್
ಅಮೃತಸರ, 03 ಮೇ (ಹಿ.ಸ.) : ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬ್ ಅಮೃತಸರ ಕಮಿಷನರೇಟ್ ಪೊಲೀಸರು ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 7 ಅತ್ಯಾಧುನಿಕ ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊ
Arams


ಅಮೃತಸರ, 03 ಮೇ (ಹಿ.ಸ.) :

ಆ್ಯಂಕರ್ : ಮಹತ್ವದ ಕಾರ್ಯಾಚರಣೆಯಲ್ಲಿ ಪಂಜಾಬ್ ಅಮೃತಸರ ಕಮಿಷನರೇಟ್ ಪೊಲೀಸರು ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 7 ಅತ್ಯಾಧುನಿಕ ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಶಸ್ತ್ರಾಸ್ತ್ರಗಳಲ್ಲಿ ಆಸ್ಟ್ರಿಯಾದಲ್ಲಿ ತಯಾರಾದ 2 ಗ್ಲಾಕ್ 9 ಎಂಎಂ ಪಿಸ್ತೂಲ್ಗಳು, ಚೀನಾದಲ್ಲಿ ತಯಾರಾದ 4 .30 ಬೋರ್ ಪಿಸ್ತೂಲ್ಗಳು ಹಾಗೂ ಇನ್ನೊಂದು ಹೆಚ್ಚುವರಿ .30 ಬೋರ್ ಪಿಸ್ತೂಲ್ ಸೇರಿವೆ. ಇವುಗಳನ್ನು ಪಂಜಾಬ್ ರಾಜ್ಯದ ಕ್ರಿಮಿನಲ್ ಜಾಲಗಳಿಗೆ ವಿತರಿಸಲು ಸಂಗ್ರಹಿಸಲಾಗಿತ್ತು ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಪಂಜಾಬ್ ಡಿಜಿಪಿ, ಬಂಧಿತ ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರೊಂದಿಗೆ ಸಂಪರ್ಕದಲ್ಲಿದ್ದು, ಗಡಿಯಾಚೆಯಿಂದ ಅಕ್ರಮವಾಗಿ ತರಲಾಗುತ್ತಿದ್ದ ಶಸ್ತ್ರಾಸ್ತ್ರಗಳನ್ನು ಸ್ವೀಕರಿಸಿ ಸ್ಥಳೀಯ ಅಪರಾಧಿಗಳ ಕೈಗೆ ತಲುಪಿಸುತ್ತಿದ್ದರು.

ಈ ಸಂಬಂಧ ಅಮೃತಸರದ ಕಂಟೋನ್ಮೆಂಟ್ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಾಲದ ಮುಂದಿನ ಹಾಗೂ ಹಿಂದಿನ ಸಂಪರ್ಕಗಳನ್ನು ಪತ್ತೆಹಚ್ಚಲು ತನಿಖೆ ವಿಸ್ತರಿಸಲಾಗಿದೆ. ಇನ್ನಷ್ಟು ಸಹಚರರನ್ನು ಗುರುತಿಸಲು ಹಾಗೂ ಅಂತಾರಾಷ್ಟ್ರೀಯ ಸಂಪರ್ಕಗಳನ್ನು ಅನಾವರಣಗೊಳಿಸಲು ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande