
ಬೆಂಗಳೂರು, 03 ಮೇ (ಹಿ.ಸ.) :
ಆ್ಯಂಕರ್ : ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಮತಗಳ ಮರು ಎಣಿಕೆ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರತಿ ಪಕ್ಷದ ನಾಯಕ ಆರ್.ಅಶೋಕ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಅಕ್ರಮವಾಗಿ ತಿರಸ್ಕರಿಸಿ ಜನಾದೇಶವನ್ನು ಬದಲಾಯಿಸಲಾಗಿದೆ ಎಂಬುದು ಇದೀಗ ಮರು ಎಣಿಕೆಯಲ್ಲಿ ಬಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡರ ಗೆಲುವು ಪ್ರಶ್ನಾರ್ಹವಾಗಿದ್ದು, ನ್ಯಾಯಾಂಗ ಹೋರಾಟದ ಮೂಲಕ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ನ್ಯಾಯ ದೊರಕಿದೆ ಎಂದು ಅವರು ಹೇಳಿದ್ದಾರೆ.
ಹೈಕೋರ್ಟ್ ಆದೇಶದ ನಂತರ ನಡೆದ ಮರು ಎಣಿಕೆಯಿಂದ ಕಾಂಗ್ರೆಸ್ “ಅಕ್ರಮ ಗೆಲುವಿನ ಕಥೆ ಬಯಲಾಗಿದೆ” ಎಂದು ಅಶೋಕ್ ಹೇಳಿದ್ದು, “ಇದು ಪ್ರಜಾಪ್ರಭುತ್ವದ ಗೆಲುವು” ಎಂದು ಪ್ರತಿಕ್ರಿಯಿಸಿದ್ದಾರೆ. ಜೊತೆಗೆ ಡಿ.ಎನ್. ಜೀವರಾಜ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa