
ಬೆಂಗಳೂರು, 03 ಮೇ (ಹಿ.ಸ.) :
ಆ್ಯಂಕರ್ : ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪತ್ರಕರ್ತರ ಧೈರ್ಯ ಮತ್ತು ನಿಷ್ಠೆಗೆ ಗೌರವ ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಸತ್ಯವನ್ನು ಜನರಿಗೆ ತಲುಪಿಸಲು ನಿರಂತರವಾಗಿ ಶ್ರಮಿಸುತ್ತಿರುವ ಪತ್ರಕರ್ತರ ಪಾತ್ರ ಶ್ಲಾಘನೀಯವಾಗಿದೆ ಎಂದು ಹೇಳಿದ್ದಾರೆ. “ಮಾಹಿತಿ ಹೊಂದಿದ ಸಮಾಜವೇ ಶಕ್ತಿಶಾಲಿ ಸಮಾಜ. ಮುಕ್ತ ಮತ್ತು ನಿರ್ಭೀತ ಪತ್ರಿಕಾ ವ್ಯವಸ್ಥೆ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ, ಜವಾಬ್ದಾರಿಯನ್ನು ಖಚಿತಪಡಿಸುತ್ತದೆ ಮತ್ತು ನಾಗರಿಕರಿಗೆ ಜ್ಞಾನವನ್ನು ನೀಡುತ್ತದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಜೊತೆಗೆ, ಅಭಿವೃದ್ಧಿ ಮತ್ತು ಜವಾಬ್ದಾರಿಯುತ ರಾಷ್ಟ್ರ ನಿರ್ಮಾಣದಲ್ಲಿ ಪತ್ರಕರ್ತರ ಸೇವೆ ಅನಿವಾರ್ಯವಾಗಿದ್ದು, ಅವರಿಗೆ ಆಳವಾದ ಗೌರವ ಸಲ್ಲಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa