ಶಿವಮೊಗ್ಗದಲ್ಲಿ ಬಿಜೆಪಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗಕ್ಕೆ ಚಾಲನೆ
ನಾನಾ
Training


ಶಿವಮೊಗ್ಗ, 30 ಮೇ (ಹಿ.ಸ.) :

ಆ್ಯಂಕರ್ : ಬಿಜೆಪಿ ಶಿವಮೊಗ್ಗ ಜಿಲ್ಲೆ ವತಿಯಿಂದ ನಗರದ ಶುಭಶ್ರೀ ಕಲ್ಯಾಣ ಮಂದಿರದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ-2026 ಜಿಲ್ಲಾ ಮಟ್ಟದ ಪ್ರಮುಖ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭವು ಶನಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾಗವಹಿಸಿ, ಗಣ್ಯರೊಂದಿಗೆ ಜ್ಯೋತಿ ಬೆಳಗುವ ಮೂಲಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಕಾರ್ಯಕರ್ತರಿಗೆ ಬೌದ್ಧಿಕ ಅವಧಿಯಲ್ಲಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಸೈದ್ಧಾಂತಿಕ ಹಿನ್ನೆಲೆ, ಸಂಘಟನಾತ್ಮಕ ಮೌಲ್ಯಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ತಳಮಟ್ಟದ ಜನರಿಗೆ ಪರಿಣಾಮಕಾರಿಯಾಗಿ ತಲುಪಿಸಲು ಕಾರ್ಯಕರ್ತರನ್ನು ಸಜ್ಜುಗೊಳಿಸುವಲ್ಲಿ ಇಂತಹ ಪ್ರಶಿಕ್ಷಣ ವರ್ಗಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಏಕಾತ್ಮ ಮಾನವತಾವಾದದ ಪ್ರತಿಪಾದಕರಾದ ಪಂಡಿತ ದೀನದಯಾಳ್ ಉಪಾಧ್ಯಾಯ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ತರಬೇತಿ ಶಿಬಿರಗಳು ದಿಕ್ಸೂಚಿಯಾಗಲಿವೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಮುಖ್ಯ ಸಚೇತಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ನಾನಾ ಘಟಕಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande