ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಲು ಡಿ.ಡಿ. ಮೋರನಾಳ ಒತ್ತಾಯ
ಗದಗ, 30 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿದ್ದು, ರೋಣ ಮತಕ್ಷೇತ್ರದ ಜನಪ್ರಿಯ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಂಡರಗಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮುಂಡರಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.
ಫೋಟೋ


ಗದಗ, 30 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಗಲಿದ್ದು, ರೋಣ ಮತಕ್ಷೇತ್ರದ ಜನಪ್ರಿಯ ಶಾಸಕ ಜಿ.ಎಸ್. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಮುಂಡರಗಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಹಾಗೂ ಮುಂಡರಗಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಡಿ. ಮೋರನಾಳ ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿ.ಎಸ್. ಪಾಟೀಲರು ರೋಣ ಮತಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜಿಲ್ಲೆಯ ಕಾಂಗ್ರೆಸ್ ಶಾಸಕರ ಪೈಕಿ ಹಿರಿಯ ಹಾಗೂ ಅನುಭವಿ ನಾಯಕರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವಲ್ಲಿ ಹಾಗೂ ಸಂಘಟಿಸುವಲ್ಲಿ ಜಿ.ಎಸ್. ಪಾಟೀಲರು ಮಹತ್ವದ ಪಾತ್ರವಹಿಸಿದ್ದು, ರೋಣ ಕ್ಷೇತ್ರವನ್ನು ಕಾಂಗ್ರೆಸ್ನ ಭದ್ರಕೋಟೆಯಾಗಿ ರೂಪಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 25 ಸಾವಿರ ಮತಗಳ ಭಾರೀ ಅಂತರದಲ್ಲಿ ಜಯಗಳಿಸಿರುವುದು ಅವರ ಜನಪ್ರಿಯತೆಗೆ ಸ್ಪಷ್ಟ ಸಾಕ್ಷಿಯಾಗಿದೆ. ರೈತರು, ಕಾರ್ಮಿಕರು, ಬಡವರು ಹಾಗೂ ಹಿಂದುಳಿದ ವರ್ಗಗಳ ಪರ ಸದಾ ಸ್ಪಂದಿಸುವ ಜನನಾಯಕರಾಗಿ ಜಿ.ಎಸ್. ಪಾಟೀಲರು ಗುರುತಿಸಿಕೊಂಡಿದ್ದಾರೆ ಎಂದು ಡಿ.ಡಿ. ಮೋರನಾಳ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹಿಂದಿನ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿಯೇ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿತ್ತು. ಆ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮುಂದಿನ ಸಂಪುಟ ಪುನರ್ರಚನೆಯಲ್ಲಿ ಅವಕಾಶ ನೀಡುವುದಾಗಿ ಭರವಸೆ ನೀಡಿ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿತ್ತು ಎಂದು ಅವರು ತಿಳಿಸಿದ್ದಾರೆ.

ಈಗ ಸಚಿವ ಸ್ಥಾನ ನೀಡಲು ಸೂಕ್ತ ಸಮಯ ಬಂದಿದ್ದು, ಕಾಂಗ್ರೆಸ್ ಹೈಕಮಾಂಡ್ ತನ್ನ ಹಿಂದಿನ ಭರವಸೆಯನ್ನು ಈಡೇರಿಸಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು. ಇದರಿಂದ ರಾಜ್ಯ ಹಾಗೂ ರೋಣ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸಿದಂತಾಗುತ್ತದೆ ಎಂದು ಡಿ.ಡಿ. ಮೋರನಾಳ ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande