ಹಿಂದಿ ಪತ್ರಿಕೋದ್ಯಮ ದಿನ ; ಪತ್ರಕರ್ತರಿಗೆ ಗಣ್ಯರ ಶುಭಾಶಯ
ನವದೆಹಲಿ, 30 ಮೇ (ಹಿ.ಸ.) : ಆ್ಯಂಕರ್ : ಹಿಂದಿ ಪತ್ರಿಕೋದ್ಯಮ ದಿನಾಚರಣೆಯ ಅಂಗವಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಗಿರಿರಾಜ್ ಸಿಂಗ್ ಮತ್ತು ವೀರೇಂದ್ರ ಕುಮಾರ್ ಅವರು ಪತ್ರಕರ್ತರು, ಲೇಖಕರು ಹಾಗೂ ಮಾಧ್ಯಮ ಕ್ಷೇತ್ರದ ಸಿಬ್ಬಂದಿಗೆ ಹೃತ್ಪೂರ್ವಕ ಶುಭಾಶಯಗ
ಸಾಂಕೇತಿಕ


ನವದೆಹಲಿ, 30 ಮೇ (ಹಿ.ಸ.) :

ಆ್ಯಂಕರ್ : ಹಿಂದಿ ಪತ್ರಿಕೋದ್ಯಮ ದಿನಾಚರಣೆಯ ಅಂಗವಾಗಿ ಲೋಕಸಭಾಧ್ಯಕ್ಷ ಓಂ ಬಿರ್ಲಾ ಹಾಗೂ ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಗಿರಿರಾಜ್ ಸಿಂಗ್ ಮತ್ತು ವೀರೇಂದ್ರ ಕುಮಾರ್ ಅವರು ಪತ್ರಕರ್ತರು, ಲೇಖಕರು ಹಾಗೂ ಮಾಧ್ಯಮ ಕ್ಷೇತ್ರದ ಸಿಬ್ಬಂದಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸಿದ್ದಾರೆ.

ಹಿಂದಿ ಪತ್ರಿಕೋದ್ಯಮವು ಜನಜಾಗೃತಿ ಮೂಡಿಸುವುದು, ಸಾಮಾಜಿಕ ಪರಿವರ್ತನೆಗೆ ವೇದಿಕೆಯಾಗುವುದು ಹಾಗೂ ಪ್ರಜಾಪ್ರಭುತ್ವವನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ. ಡಿಜಿಟಲ್ ಯುಗದಲ್ಲಿ ಹಿಂದಿ ಭಾಷೆಯ ವ್ಯಾಪ್ತಿ ಮತ್ತಷ್ಟು ವಿಸ್ತರಿಸುತ್ತಿದ್ದು, ಸಾಮಾಜಿಕ ಜಾಲತಾಣಗಳು, ಅಂತರ್ಜಾಲ ಮತ್ತು ಹೊಸ ತಂತ್ರಜ್ಞಾನಗಳ ಮೂಲಕ ಕೋಟ್ಯಂತರ ಜನರನ್ನು ತಲುಪುತ್ತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಸತ್ಯತೆ, ನಿಷ್ಪಕ್ಷಪಾತತೆ ಮತ್ತು ಜನಹಿತದ ಮೌಲ್ಯಗಳನ್ನು ಉಳಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಪತ್ರಿಕೋದ್ಯಮದ ಕೊಡುಗೆ ಮುಂದುವರಿಯಲಿ ಎಂದು ಗಣ್ಯರು ಆಶಿಸಿದ್ದಾರೆ. ಜನರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸೇವೆಯನ್ನು ಅವರು ಈ ಸಂದರ್ಭದಲ್ಲಿ ಶ್ಲಾಘಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande