ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಸರ್ವಾನುಮತದ ಆಯ್ಕೆ : ಕೆ.ಸಿ.ವೇಣುಗೋಪಾಲ್
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದರು. ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್
Dks congrats


ಬೆಂಗಳೂರು, 30 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಘೋಷಿಸಿದರು.

ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಜಿ.ಪರಮೇಶ್ವರ ಅನುಮೋದಿಸಿದರು. ಬಳಿಕ ಸಭೆಯಲ್ಲಿದ್ದ ಎಲ್ಲ ಶಾಸಕರು ಸರ್ವಾನುಮತದಿಂದ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಿದರು.

ಆಯ್ಕೆ ಪ್ರಕ್ರಿಯೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ. ವೇಣುಗೋಪಾಲ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಮತ್ತು ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಜನಪರ ಆಡಳಿತವನ್ನು ಮುಂದುವರಿಸಲಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯ ಸಾಧಿಸಿ, ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ, 2028ರ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಗುರಿಯೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕಾಂಗ ಪಕ್ಷದ ಸಭೆಯಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು ಹಾಗೂ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದು, ಡಿ.ಕೆ. ಶಿವಕುಮಾರ್ ಅವರ ಆಯ್ಕೆಯನ್ನು ಸ್ವಾಗತಿಸಿದರು.

ಶಾಸಕಾಂಗ ಸಭೆಯ ನಂತರ ಕಾಂಗ್ರೆಸ್ ನಿಯೋಗ ಲೋಕಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಪದಗ್ರಹಣ ಸಮಾರಂಭದ ಸ್ಥಳ ಹಾಗೂ ಸ್ವರೂಪದ ಕುರಿತ ಗೊಂದಲಕ್ಕೂ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಆರಂಭದಲ್ಲಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪದಗ್ರಹಣ ನಡೆಯಲಿದೆ ಎಂಬ ಸುದ್ದಿಗಳು ಹರಿದಾಡಿದ್ದರೂ, ಅಂತಹ ಯಾವುದೇ ಕಾರ್ಯಕ್ರಮ ನಿಗದಿಯಾಗಿಲ್ಲ ಎಂದು ಪಕ್ಷ ತಿಳಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ಜೂನ್ 3ರಂದು ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನೂತನ ಮುಖ್ಯಮಂತ್ರಿಯ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande