ಕಾಣೆಯಾದ ಮಕ್ಕಳ ಪತ್ತೆ ಕುರಿತು ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು, 30 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕಾಣೆಯಾದ ಮಕ್ಕಳ ಪತ್ತೆಗಾಗಿ ರಚಿಸಲಾಗಿರುವ ವಿಶೇಷ ಕಾರ್ಯಪಡೆ ತಂಡದೊಂದಿಗೆ ಮಾಸಿಕ ಪರಿಶೀಲನಾ ಸಭೆ ನಡೆಸಲಾಯಿತು. ಸಭೆಯಲ್ಲಿ ಕಾರ್ಯಪಡೆಯಿಂದ ಇದುವರೆಗೆ ಕೈಗೊಂಡಿರುವ ಕಾರ್ಯಾಚರಣೆಗಳು, ಪತ್ತೆಹಚ್ಚಲಾದ ಮಕ್ಕಳ
Meeting


ಬೆಂಗಳೂರು, 30 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕಾಣೆಯಾದ ಮಕ್ಕಳ ಪತ್ತೆಗಾಗಿ ರಚಿಸಲಾಗಿರುವ ವಿಶೇಷ ಕಾರ್ಯಪಡೆ ತಂಡದೊಂದಿಗೆ ಮಾಸಿಕ ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಕಾರ್ಯಪಡೆಯಿಂದ ಇದುವರೆಗೆ ಕೈಗೊಂಡಿರುವ ಕಾರ್ಯಾಚರಣೆಗಳು, ಪತ್ತೆಹಚ್ಚಲಾದ ಮಕ್ಕಳ ವಿವರಗಳು ಹಾಗೂ ಬಾಕಿ ಇರುವ ಪ್ರಕರಣಗಳ ಪ್ರಗತಿ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.

ಕಾಣೆಯಾದ ಮಕ್ಕಳನ್ನು ಶೀಘ್ರವಾಗಿ ಪತ್ತೆಹಚ್ಚಲು ಕೈಗೊಳ್ಳಬೇಕಾದ ಕ್ರಮಗಳು, ತಾಂತ್ರಿಕ ನೆರವಿನ ಬಳಕೆ ಮತ್ತು ವಿವಿಧ ಜಿಲ್ಲೆಗಳೊಂದಿಗೆ ಸಮನ್ವಯ ಸಾಧಿಸುವ ಕುರಿತು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.

ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಕಾರ್ಯಪಡೆಯ ಕಾರ್ಯಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಿ, ಪ್ರತಿಯೊಂದು ಪ್ರಕರಣವನ್ನೂ ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ವಿಶೇಷ ಕಾರ್ಯಪಡೆಯ ಸದಸ್ಯರು ಉಪಸ್ಥಿತರಿದ್ದು, ಕಾರ್ಯಾಚರಣೆಯ ಪ್ರಗತಿ ಮತ್ತು ಮುಂದಿನ ಕಾರ್ಯಯೋಜನೆ ಕುರಿತು ಚರ್ಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande