ಗಡಿ ಭದ್ರತೆಯಲ್ಲಿ ಹೊಸ ಯುಗಕ್ಕೆ ನಾಂದಿ : ಅಮಿತ್ ಶಾ
ನವದೆಹಲಿ, 31 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಗಡಿ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾಂಪ್ರದಾಯಿಕ ಗಡಿ ಕಾವಲು ವ್ಯವಸ್ಥೆಯನ್ನು ಮೀರಿ ಪ್ರಾದೇಶಿಕ ಭದ್ರತೆಯ ಹೊಸ ಯುಗಕ್ಕೆ ನಾಂದಿ ಹಾ
ಅಮಿತ್ ಶಾ


ನವದೆಹಲಿ, 31 ಮೇ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಗಡಿ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾಂಪ್ರದಾಯಿಕ ಗಡಿ ಕಾವಲು ವ್ಯವಸ್ಥೆಯನ್ನು ಮೀರಿ ಪ್ರಾದೇಶಿಕ ಭದ್ರತೆಯ ಹೊಸ ಯುಗಕ್ಕೆ ನಾಂದಿ ಹಾಡುತ್ತಿದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಡ್ರೋನ್ಗಳು, ಅತ್ಯಾಧುನಿಕ ರಾಡಾರ್ ವ್ಯವಸ್ಥೆಗಳು, ಕೃತಕ ಬುದ್ಧಿಮತ್ತೆ ಆಧಾರಿತ ನಿಗಾ ತಂತ್ರಜ್ಞಾನಗಳು ಹಾಗೂ ಸುಧಾರಿತ ಮೇಲ್ವಿಚಾರಣಾ ಸಾಧನಗಳ ಮೂಲಕ ಭಾರತದ ಗಡಿಗಳಿಗೆ ಅಭೇದ್ಯ ಭದ್ರತಾ ಕವಚವನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ದೇಶದ ಭದ್ರತಾ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು, ಗಡಿಭಾಗಗಳಲ್ಲಿ ತಂತ್ರಜ್ಞಾನ ಆಧಾರಿತ ನಿಗಾವ್ಯವಸ್ಥೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ಗಡಿ ನುಸುಳುವಿಕೆ, ಅಕ್ರಮ ಚಟುವಟಿಕೆಗಳು ಮತ್ತು ಭದ್ರತಾ ಸವಾಲುಗಳನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಭೌಗೋಳಿಕ ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ತಂತ್ರಜ್ಞಾನದ ಪಾತ್ರ ಮಹತ್ವದ್ದಾಗಿದ್ದು, ಭವಿಷ್ಯದ ಸವಾಲುಗಳನ್ನು ಎದುರಿಸಲು ದೇಶದ ಗಡಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಸಬಲಗೊಳಿಸಲಾಗುತ್ತಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande