
ಚಿತ್ರದುರ್ಗ, 31 ಮೇ (ಹಿ.ಸ.) :
ಆ್ಯಂಕರ್ : ಜೂನ್ 12ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನ ಕಾರ್ಯಕ್ರಮದ ಆಯೋಜನೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಮತ್ತು ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿ ಸಭೆ ಜೂನ್ 05ರಂದು ಮಧ್ಯಾಹ್ನ 12ಕ್ಕೆ ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧ್ಯಕ್ಷ ಟಿ.ವೆಂಕಟೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.