
ಚಿತ್ರದುರ್ಗ, 31 ಮೇ (ಹಿ.ಸ.) :
ಆ್ಯಂಕರ್ : ಚಿತ್ರದುರ್ಗ ತಾಲ್ಲೂಕು ಪಂಚಾಯತ್ 2026-27ನೇ ಮೊದಲನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ಜೂನ್ 04ರಂದು ಬೆಳಿಗ್ಗೆ 10.30 ಕ್ಕೆ ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಸಭೆಯಲ್ಲಿ ವಿವಿಧ ಇಲಾಖೆಗಳ ಮಾರ್ಚ್-2026ರ ಅಂತ್ಯಕ್ಕೆ ಸಾಧಿಸಿದ ಹಾಗೂ 2026-27ನೇ ಸಾಲಿನ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಯಲಿದೆ ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.