ವಸತಿ ಯೋಜನೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ, 31 ಮೇ (ಹಿ.ಸ.) : ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ನಿವೇಶ
ವಸತಿ ಯೋಜನೆಗೆ ಅರ್ಜಿ ಆಹ್ವಾನ


ಚಿತ್ರದುರ್ಗ, 31 ಮೇ (ಹಿ.ಸ.) :

ಆ್ಯಂಕರ್ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನರಿಗೆ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರಿಗೆ ನಿವೇಶನ ಹೊಂದಿದ್ದು, ವಸತಿ ರಹಿತರಾಗಿರುವ ಟೆಂಟ್ ಅಥವಾ ಗುಡಿಸಲುಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಕುಟುಂಬಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಚಿತ್ರದುರ್ಗ ಜಿಲ್ಲೆಗೆ ಪರಿಶಿಷ್ಟ ಜಾತಿಯ ಸಮುದಾಯದವರಿಗೆ ಒಟ್ಟು 100 ಮನೆಗಳ ನಿರ್ಮಾಣದ ಗುರಿ ನಿಗದಿಪಡಿಸಲಾಗಿದೆ.

ಅದರಂತೆ ಚಿತ್ರದುರ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಎಲ್ಲಾ ಟೆಂಟು/ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ಪರಿಶಿಷ್ಟ ಜಾತಿ ಅಲೆಮಾರಿ ಸಮುದಾಯದವರು ದಾಖಲಾತಿಗಳೊಂದಿಗೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಶ್ರೀಕಲುಗಲಕ್ಷ್ಮಿ ನಿಲಯ, 3ನೇ ಕ್ರಾಸ್, ಆದಿಶಕ್ತಿ ನಗರ, ಚಳ್ಳಕೆರೆ ರಸ್ತೆ, ಚಿತ್ರದುರ್ಗ ಕಚೇರಿ ಹಾಗೂ ದೂರವಾಣಿ ಸಂಖ್ಯೆ 9480843107 ಸಂಪರ್ಕಿಸಲು ಕೋರಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಫಲಾನುಭವಿಗಳು ಸ್ವಂತ ನಿವೇಶನ ಹೊಂದಿರುವುದಕ್ಕೆ ಸಂಬಂಧಿಸಿದ ಹಕ್ಕುಪತ್ರ ಅಥವಾ ಪೂರಕ ದಾಖಲಾತಿ ಪ್ರತಿ, 2 ಪಾಸ್ಫೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳು, ಆರ್.ಡಿ ಸಂಖ್ಯೆ ಹೊಂದಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ ಹಾಗೂ ಬ್ಯಾಂಕ್ ಖಾತೆಯ ಪಾಸ್ಬುಕ್ ನಕಲು ಪ್ರತಿಯನ್ನು ಒದಗಿಸಬೇಕಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗ್ರೇಡ್-1 ಓ.ಪರಮೇಶ್ವರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande