ಕೇಂದ್ರ ಸರಕಾರದಿಂದ ಶಿಕ್ಷಣ ವ್ಯವಸ್ಥೆ ಹಾಳು : ಖರ್ಗೆ ಆರೋಪ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ ಶಿಕ್ಷಣ ನೀತಿ ಹಾಗೂ ಪರೀಕ್ಷಾ ವ್ಯವಸ್ಥೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ದೇಶದ ಯುವಜನತೆಯನ್ನು ನಿರಾಶೆಗೊಳಿಸಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು
kharge


ಬೆಂಗಳೂರು, 31 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ ಶಿಕ್ಷಣ ನೀತಿ ಹಾಗೂ ಪರೀಕ್ಷಾ ವ್ಯವಸ್ಥೆಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸರ್ಕಾರ ದೇಶದ ಯುವಜನತೆಯನ್ನು ನಿರಾಶೆಗೊಳಿಸಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಕಷ್ಟಕ್ಕೆ ತಳ್ಳಿದೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ, ಸಿಬಿಎಸ್ಇ ಮತ್ತು ನೀಟ್ ಪರೀಕ್ಷಾರ್ಥಿಗಳ ಭವಿಷ್ಯವನ್ನು ಹಾಳು ಮಾಡುವ ರೀತಿಯಲ್ಲಿ ಶಿಕ್ಷಣ ವ್ಯವಸ್ಥೆ ದುರ್ಬಲಗೊಂಡಿದೆ ಎಂದು ಖರ್ಗೆ ಟೀಕಿಸಿದ್ದಾರೆ.

ಐಐಟಿ, ಐಐಎಂ, ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆ ಕುಗ್ಗಿದ್ದು, ಯುಜಿಸಿ, ಜೆಎನ್ಯು ಹಾಗೂ ಇತರ ವಿಶ್ವವಿದ್ಯಾಲಯಗಳಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ ಎಂದು ದೂರಿದ್ದಾರೆ.

ಇದೇ ವೇಳೆ, ಶಿಕ್ಷಣ ಬಜೆಟ್ ಕಡಿತ, ಸರ್ಕಾರಿ ಶಾಲೆಗಳ ಮುಚ್ಚುವಿಕೆ ಹಾಗೂ ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿರುವ ಅವರು, ನೇಮಕಾತಿ ಪರೀಕ್ಷೆಗಳ ಅಕ್ರಮಗಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಹೇಳಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರುವ ಖರ್ಗೆ, ಆಗ ಮಾತ್ರ ದೇಶದ ಯುವಕರಿಗೆ ನ್ಯಾಯ ದೊರೆಯಲಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande