‘ಮನ್ ಕಿ ಬಾತ್’ ದೇಶಕ್ಕೆ ಸ್ಫೂರ್ತಿ ನೀಡುವ ಜನಾಂದೋಲನ : ನಿತಿನ್ ನವೀನ್
ನವದೆಹಲಿ, 31 ಮೇ (ಹಿ.ಸ.) : ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ದೇಶದ ಜನರನ್ನು ಸಕಾರಾತ್ಮಕ ಬದಲಾವಣೆಯತ್ತ ಪ್ರೇರೇಪಿಸುವ ಶಕ್ತಿಶಾಲಿ ವೇದಿಕೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಹೇಳಿದ್ದಾರೆ. ಭಾನುವಾರ ಬಿಜೆಪಿ ಕೇಂದ್ರ ಕಚೇ
ನಿತಿನ್ ನವೀನ


ನವದೆಹಲಿ, 31 ಮೇ (ಹಿ.ಸ.) :

ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ದೇಶದ ಜನರನ್ನು ಸಕಾರಾತ್ಮಕ ಬದಲಾವಣೆಯತ್ತ ಪ್ರೇರೇಪಿಸುವ ಶಕ್ತಿಶಾಲಿ ವೇದಿಕೆಯಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ ಹೇಳಿದ್ದಾರೆ.

ಭಾನುವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ‘ಮನ್ ಕಿ ಬಾತ್’ ಕಾರ್ಯಕ್ರಮವನ್ನು ಆಲಿಸಿದ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ತೀವ್ರ ಬೇಸಿಗೆಯ ನಡುವೆಯೂ ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸುವ ಸಂದೇಶ ನೀಡಿದರು. ಜೊತೆಗೆ “ಸ್ಥಳೀಯದಿಂದ ಜಾಗತಿಕಕ್ಕೆ” ಎಂಬ ಪರಿಕಲ್ಪನೆಯಡಿ ಭಾರತೀಯ ಉತ್ಪನ್ನಗಳಿಗೆ ವಿಶ್ವಮಟ್ಟದಲ್ಲಿ ದೊರೆಯುತ್ತಿರುವ ಮನ್ನಣೆ, ದೇಶದ ಉದಯೋನ್ಮುಖ ಕ್ರೀಡಾ ಪ್ರತಿಭೆಗಳು, ನಾವೀನ್ಯತೆ, ವಿಜ್ಞಾನ ಹಾಗೂ ಖಗೋಳಶಾಸ್ತ್ರ ಕ್ಷೇತ್ರಗಳಲ್ಲಿ ಯುವಜನರ ಹೆಚ್ಚುತ್ತಿರುವ ಆಸಕ್ತಿ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು ಎಂದು ನಿತಿನ್ ನವೀನ್ ತಿಳಿಸಿದ್ದಾರೆ.

ಇದರ ಜೊತೆಗೆ ಜಲ ಸಂರಕ್ಷಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತೀಯ ಸಂಸ್ಕೃತಿಗೆ ದೊರೆಯುತ್ತಿರುವ ಮಾನ್ಯತೆ ಕುರಿತೂ ಪ್ರಧಾನಿ ಪ್ರಸ್ತಾಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

‘ಮನ್ ಕಿ ಬಾತ್’ ಕಾರ್ಯಕ್ರಮವು ದೇಶದ ಅನಾಮಧೇಯ ಸಾಧಕರು, ಸಮಾಜ ಸೇವಕರು ಮತ್ತು ವಿವಿಧ ಕ್ಷೇತ್ರಗಳ ವೀರರಿಗೆ ರಾಷ್ಟ್ರೀಯ ಮಟ್ಟದ ಗುರುತಿನ ವೇದಿಕೆಯನ್ನು ಒದಗಿಸುತ್ತಿದೆ. ಸಾರ್ವಜನಿಕರ ಪಾಲ್ಗೊಳ್ಳುವಿಕೆಯಿಂದ ನಡೆಯುವ ಈ ಕಾರ್ಯಕ್ರಮ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣವಾಗುತ್ತಿದ್ದು, ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸ್ಫೂರ್ತಿ ನೀಡುತ್ತಿದೆ ಎಂದು ನಿತಿನ್ ನವೀನ್ ಅಭಿಪ್ರಾಯಪಟ್ಟಿದ್ದಾರೆ.

ದೇಶದ ಅಭಿವೃದ್ಧಿ, ಜನಜಾಗೃತಿ ಮತ್ತು ಸಾಮಾಜಿಕ ಹೊಣೆಗಾರಿಕೆಯನ್ನು ಬಲಪಡಿಸುವಲ್ಲಿ ‘ಮನ್ ಕಿ ಬಾತ್’ ಮಹತ್ವದ ಪಾತ್ರ ವಹಿಸುತ್ತಿದ್ದು, ಜನಸಾಮಾನ್ಯರನ್ನು ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande