ಮನ್ ಕಿ ಬಾತ್ ಕಾರ್ಯಕ್ರಮ ಪ್ರೇರಣೆಯ ಚಿಲುಮೆ : ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ, 31 ಮೇ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ದೇಶದ ಕೋಟ್ಯಂತರ ಜನರಿಗೆ ನಿರಂತರವಾಗಿ ಪ್ರೇರಣೆ ನೀಡುತ್ತಿದ್ದು, ನಾವೀನ್ಯತೆ, ರಾಷ್ಟ್ರ ನಿರ್ಮಾಣ ಹಾಗೂ ಸಾಮೂಹಿಕ ಪ್ರಗತಿಯ ಅನೇಕ ಯಶೋಗಾಥೆಗಳನ್ನು ಜನರ ಮುಂದೆ ತರುತ್ತಿದೆ
ಕಾರಜೋಳ


ಚಿತ್ರದುರ್ಗ, 31 ಮೇ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ದೇಶದ ಕೋಟ್ಯಂತರ ಜನರಿಗೆ ನಿರಂತರವಾಗಿ ಪ್ರೇರಣೆ ನೀಡುತ್ತಿದ್ದು, ನಾವೀನ್ಯತೆ, ರಾಷ್ಟ್ರ ನಿರ್ಮಾಣ ಹಾಗೂ ಸಾಮೂಹಿಕ ಪ್ರಗತಿಯ ಅನೇಕ ಯಶೋಗಾಥೆಗಳನ್ನು ಜನರ ಮುಂದೆ ತರುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಭಾನುವಾರ ಪ್ರಸಾರವಾದ ಮನ್ ಕಿ ಬಾತ್ ಕಾರ್ಯಕ್ರಮವನ್ನು ಹಿರಿಯೂರಿನಿಂದ ಚಿತ್ರದುರ್ಗಕ್ಕೆ ಪ್ರಯಾಣಿಸುತ್ತಿದ್ದ ವೇಳೆ ವಾಹನದಲ್ಲಿಯೇ ಆಲಿಸಿದ ಅವರು, ಕಾರ್ಯಕ್ರಮದ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ದೇಶದ ಕಟ್ಟಕಡೆಯ ಪ್ರಜೆಯ ಸಾಧನೆಯನ್ನೂ ಗುರುತಿಸಿ, ಆ ವ್ಯಕ್ತಿಯ ಕಥೆಯನ್ನು ಇಡೀ ರಾಷ್ಟ್ರಕ್ಕೆ ಪರಿಚಯಿಸುವ ಪ್ರಧಾನಮಂತ್ರಿಯವರ ವಿಶಿಷ್ಟ ಸಂವಾದವು ಜನರಲ್ಲಿ ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸ ಮೂಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಮಾನ್ಯ ನಾಗರಿಕರ ಪ್ರಯತ್ನಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವ ಮೂಲಕ ಜನರಲ್ಲಿ ಸಕಾರಾತ್ಮಕ ಚಿಂತನೆ ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಮನ್ ಕಿ ಬಾತ್ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು.

ಪ್ರಧಾನಮಂತ್ರಿಗಳ ಈ ಜನಸಂವಾದವು ದೇಶದ ಅಭಿವೃದ್ಧಿ ಪಯಣಕ್ಕೆ ಜನಸಹಭಾಗಿತ್ವವನ್ನು ಮತ್ತಷ್ಟು ಬಲಪಡಿಸುತ್ತಿದ್ದು, ಯುವಜನತೆ ಸೇರಿದಂತೆ ಎಲ್ಲ ವರ್ಗಗಳಲ್ಲೂ ಹೊಸ ಚೇತನ ಮತ್ತು ಪ್ರೇರಣೆಯನ್ನು ತುಂಬುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande