ಆಟೋ ಚಾಲಕರು ಹಾಗೂ ಮಾಲೀಕರೊಂದಿಗೆ ಪೊಲೀಸ್ ಸಭೆ
ಹುಣಸೂರು, 31 ಮೇ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರು ಹಾಗೂ ಆಟೋ ಮಾಲೀಕರೊಂದಿಗೆ ಜಾಗೃತಿ ಹಾಗೂ ಸಮನ್ವಯ ಸಭೆ ನಡೆಸಲಾಯಿತು. ಸಭೆಯಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವುದು ಹಾಗೂ ವೃತ್
Meeting


ಹುಣಸೂರು, 31 ಮೇ (ಹಿ.ಸ.) :

ಆ್ಯಂಕರ್ : ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರು ಹಾಗೂ ಆಟೋ ಮಾಲೀಕರೊಂದಿಗೆ ಜಾಗೃತಿ ಹಾಗೂ ಸಮನ್ವಯ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಾರ್ವಜನಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು, ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವುದು ಹಾಗೂ ವೃತ್ತಿಯ ಗೌರವವನ್ನು ಕಾಪಾಡಿಕೊಳ್ಳುವಂತೆ ಆಟೋ ಚಾಲಕರಿಗೆ ಸಲಹೆ ನೀಡಲಾಯಿತು. ಅಲ್ಲದೆ, ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ರಸ್ತೆ ಸುರಕ್ಷತೆಗೆ ಆದ್ಯತೆ ನೀಡುವಂತೆ ಸೂಚಿಸಲಾಯಿತು.

ವಾಹನಗಳ ಅಗತ್ಯ ದಾಖಲಾತಿಗಳನ್ನು ನವೀಕರಿಸಿಕೊಂಡು ಕಾನೂನುಬದ್ಧವಾಗಿ ವಾಹನಗಳನ್ನು ಸಂಚರಿಸಬೇಕು. ಚಾಲನಾ ಪರವಾನಗಿ, ವಿಮೆ, ಫಿಟ್ನೆಸ್ ಪ್ರಮಾಣಪತ್ರ ಸೇರಿದಂತೆ ಎಲ್ಲ ದಾಖಲೆಗಳು ಮಾನ್ಯವಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳು ತಿಳಿಸಿದರು.

ಇದೇ ವೇಳೆ ಪಟ್ಟಣದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಯಿತು. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಆಟೋ ಚಾಲಕರು ಹಾಗೂ ಆಟೋ ಮಾಲೀಕರು ಭಾಗವಹಿಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಾರ್ವಜನಿಕ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಕುರಿತು ಸಲಹೆ-ಸೂಚನೆಗಳನ್ನು ವಿನಿಮಯ ಮಾಡಿಕೊಂಡರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande