ರಾಜ್ಯದಲ್ಲಿ ಬಿತ್ತನೆ ಬೀಜ ಕೊರತೆ : ಅಶೋಕ್ ಆಕ್ರೋಶ
ಬೆಂಗಳೂರು, 31 ಮೇ (ಹಿ.ಸ.) : ಆ್ಯಂಕರ್ : ಬಿತ್ತನೆ ಕಾಲ ಆರಂಭವಾಗಿದ್ದರೂ ಸೋಯಾಬೀನ್ ಬೀಜ ವಿತರಣೆಯಲ್ಲಿ ಉಂಟಾಗಿರುವ ಅವ್ಯವಸ್ಥೆಯನ್ನು ಖಂಡಿಸಿ ಬಿಜೆಪಿ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು,
ರಾಜ್ಯದಲ್ಲಿ ಬಿತ್ತನೆ ಬೀಜ ಕೊರತೆ : ಅಶೋಕ್ ಆಕ್ರೋಶ


ಬೆಂಗಳೂರು, 31 ಮೇ (ಹಿ.ಸ.) :

ಆ್ಯಂಕರ್ : ಬಿತ್ತನೆ ಕಾಲ ಆರಂಭವಾಗಿದ್ದರೂ ಸೋಯಾಬೀನ್ ಬೀಜ ವಿತರಣೆಯಲ್ಲಿ ಉಂಟಾಗಿರುವ ಅವ್ಯವಸ್ಥೆಯನ್ನು ಖಂಡಿಸಿ ಬಿಜೆಪಿ ವಿಧಾನ ಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾಜ್ಯದಲ್ಲಿ ಸೋಯಾಬೀನ್ ಬೀಜ ಪಡೆಯಲು ರೈತರು ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಸರ್ಕಾರದ ನಿರ್ಲಕ್ಷ್ಯದ ಪ್ರತೀಕವಾಗಿದೆ ಎಂದು ಆರೋಪಿಸಿದರು.

ಬಿತ್ತನೆ ಹಂಗಾಮು ಆರಂಭವಾದರೂ ರೈತರಿಗೆ ಅಗತ್ಯ ಬೀಜಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸಲು ಸರ್ಕಾರ ವಿಫಲವಾಗಿದೆ. ಬೀಜ ವಿತರಣೆಯಲ್ಲಿನ ಗೊಂದಲ ಮತ್ತು ಅವ್ಯವಸ್ಥೆಯಿಂದ ನೂರಾರು ರೈತರು ಸಂಕಷ್ಟ ಅನುಭವಿಸುತ್ತಿದ್ದು, ಇದು ರೈತಪರ ಆಡಳಿತದ ಕೊರತೆಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.

ರಾಜ್ಯದ ಕರ್ನಾಟಕ ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳತ್ತ ಗಂಭೀರವಾಗಿ ಗಮನಹರಿಸಬೇಕಿದೆ. ರೈತರಿಗೆ ಅಗತ್ಯ ಬೀಜ, ರಸಗೊಬ್ಬರ ಹಾಗೂ ಇತರ ಕೃಷಿ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವಲ್ಲಿ ಸರ್ಕಾರ ವಿಫಲವಾದರೆ ಕೃಷಿ ಚಟುವಟಿಕೆಗಳ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಅಶೋಕ್ ಎಚ್ಚರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande