
ಬಳ್ಳಾರಿ, 06 ಮೇ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗವು ಐ.ಟಿ.ಐ ಉತ್ತೀರ್ಣರಾದ ಅಭ್ಯರ್ಥಿಗಳಿಂದ ತಾಂತ್ರಿಕ ಶಿಷ್ಯವೇತನ (ಅಪ್ರೆಂಟಿಸ್) ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಬಳ್ಳಾರಿ ವಿಭಾಗದ ಘಟಕ-1, 2, 3 ಹಾಗೂ ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಲ್ಲಿ ಎಲೆಕ್ಟಿçಷಿಯನ್-08, ಡೀಸೆಲ್ ಮೆಕ್ಯಾನಿಕ್-20, ಮೋಟಾರ್ ವೆಹಿಕಲ್ ಮೆಕ್ಯಾನಿಕ್-15 ಸೇರಿ ಒಟ್ಟು 43 ಸ್ಥಾನಗಳಿಗೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಆಸಕ್ತ ಅಭ್ಯರ್ಥಿಗಳು ಮೊದಲು ಕೇಂದ್ರ ಸರ್ಕಾರದ ಅಧಿಕೃತ ಪೋರ್ಟಲ್ಗಳಾದ www.apprenticeship.gov.in ಅಥವಾ www.ncvtmis.com ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಂಡ ಅಭ್ಯರ್ಥಿಗಳು ಮಾತ್ರ ನೇರ ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ.
ಮೇ 25 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಿರುಗುಪ್ಪ ರಸ್ತೆಯ ಕೆ.ಕೆ.ಆರ್.ಟಿ.ಸಿ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಸಂದರ್ಶನದ ಮೂಲ ದಾಖಲಾತಿಗಳ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ.
ಅಗತ್ಯವಿರುವ ದಾಖಲೆಗಳು :
ಐ.ಟಿ.ಐ ಮೂಲ ಅಂಕಪಟ್ಟಿ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ 3 ಪಾಸ್ಪೋರ್ಟ್ ಅಳತೆಯ ಭಾವಚಿತ್ರಗಳು, ಬ್ಯಾಂಕ್ ಪಾಸ್ಬುಕ್ ಪ್ರತಿ (ಆಧಾರ್ ಲಿಂಕ್ ಆಗಿರಬೇಕು), ಆನ್ಲೈನ್ ನೋಂದಣಿ ಪ್ರತಿ, ಇ-ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಳ್ಳಾರಿಯ ವಿಭಾಗೀಯ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್