
ಮೈಸೂರು, 06 ಮೇ (ಹಿ.ಸ.) :
ಆ್ಯಂಕರ್ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಜೆಎಸ್ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವ ಅಂಗವಾಗಿ ಗುರುವಾರ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಜೆಎಸ್ಎಸ್ ಮಠದ ಆವರಣದಲ್ಲಿ ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, “ರಾಷ್ಟ್ರೀಯ ಅಭಿವೃದ್ಧಿಗೆ ಸಾಮಾಜಿಕ ಸೌಹಾರ್ದತೆ ಪ್ರೇರಕ” ಎಂಬ ವಿಷಯದ ಮೇಲೆ ಭಾಗವತ್ ಅವರು ಮಾತನಾಡಲಿದ್ದಾರೆ.
ಕಾರ್ಯಕ್ರಮವು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆಯಲಿದೆ. ಇದೇ ಸಂದರ್ಭದಲ್ಲಿ, ಮಧುಸೂಧನ ಸಾಯಿ ಅವರ “ಆತ್ಮನೋ ಮೋಕ್ಷಾರ್ಥಂ ಜಗತ್ ಹಿತಾಯ ಚ” ಕೃತಿಯನ್ನು ಡಾ. ಮೋಹನ್ ಭಾಗವತ್ ಬಿಡುಗಡೆ ಮಾಡುವರು.
ಜೆಎಸ್ಎಸ್ ಮಹಾವಿದ್ಯಾಪೀಠದ ಸುವರ್ಣ ಮಹೋತ್ಸವದ ಈ ಕಾರ್ಯಕ್ರಮಕ್ಕೆ ಗಣ್ಯರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa